ಬೆಂಗಳೂರು:
ರಾಜ್ಯದಲ್ಲಿ ಕಳೆದ 28 ದಿನಗಳಿಂದ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಸುಧಾರಣೆ ಕಂಡಿದ್ದು, ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.39ಕ್ಕೆ ಇಳಿಕೆಯಾಗಿದ್ದು, ಮರಣ ಪ್ರಮಾಣ ಶೇಕಡ 1.11ಕ್ಕೆ ತಗ್ಗಿದೆ. ಸರಿ ಸುಮಾರ 8.5 ಲಕ್ಷ ಮಂದಿ ಈವರೆಗೆ ಚೇತರಿಸಿಕೊಂಡಿದ್ದಾರೆ. ಚೇತರಿಕೆ ಪ್ರಮಾಣ ಶೇಕಡ 90.2ರಷ್ಟು ಏರಿಕೆ ಕಂಡಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಕಿ ಅಂಶಗಳು ತಿಳಿಸಿವೆ.
ಆದರೆ ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಸೋಂಕಿತರ ಪತ್ತೆ ಕಾರ್ಯ ವಿಚಾರದಲ್ಲಿ ರಾಜ್ಯ ಸರ್ಕಾರ ಇನ್ನಷ್ಟು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ಕೂಡ ಇತ್ತೀಚೆಗೆ ರಾಜ್ಯಕ್ಕೆ ಸೂಚನೆ ನೀಡಿದೆ.