Home Uncategorized ರಾಜ್ಯದಲ್ಲಿ ಮಳೆ ಅವಾಂತರಕ್ಕೆ 21 ಮಂದಿ ಬಲಿ, 47ಕ್ಕೂ ಹೆಚ್ಚು ಜಾನುವಾರು ಸಾವು: ರಾಜ್ಯ ಸರ್ಕಾರ

ರಾಜ್ಯದಲ್ಲಿ ಮಳೆ ಅವಾಂತರಕ್ಕೆ 21 ಮಂದಿ ಬಲಿ, 47ಕ್ಕೂ ಹೆಚ್ಚು ಜಾನುವಾರು ಸಾವು: ರಾಜ್ಯ ಸರ್ಕಾರ

10
0
Advertisement
bengaluru

ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ. ಕಾರವಾರ (ಉತ್ತರ ಕನ್ನಡ): ರಾಜ್ಯದಲ್ಲಿ ಮಳೆ ಸೃಷ್ಟಿಸಿದ ಅವಾಂತರಕ್ಕೆ 21 ಮಂದಿ ಬಲಿಯಾಗಿದ್ದು, 40ಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ಹೇಳಿದ್ದಾರೆ.

ಭಾರೀ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಕೊಚ್ಚಿ ಹೋಗಿ ಇಬ್ಬರು ಮೃತಪಟ್ಟ ಸಂಬಂಧ ಜಿಲ್ಲೆಯ ಕುಮಟಾ ತಾಲೂಕಿನ ಬೆಟ್ಕುಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಇದೇ ವೇಳೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ವಿತರಣೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗದಲ್ಲಿ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಲ್ಲೂ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಮಳೆ ಹಾನಿಗೆ ಸರ್ಕಾರ ಪರಿಹಾರ ಕೊಡಲು ಸಿದ್ಧವಿದ್ದು, ಹಾನಿಯಾದ ಮನೆಗಳಿಗೆ 1.25 ಲಕ್ಷ ಪರಿಹಾರ ನೀಡುತ್ತೇವೆ ಎಂದು ಹೇಳಿದರು.

ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದರೂ ಕೆಲವು ಜಿಲ್ಲೆಗಳಲ್ಲಿ ಮಳೆ ಕೊರತೆ ಇದೆ. ಜುಲೈ ಕೊನೆ ವಾರದವರೆಗೆ ಕಾದುನೋಡಿ ಮೋಡ ಬಿತ್ತನೆ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತೇವೆ. ಕೇಂದ್ರದ ನಿಯಮಗಳ ಅನ್ವಯ ಮೋಡ ಬಿತ್ತನೆ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

bengaluru bengaluru

bengaluru

LEAVE A REPLY

Please enter your comment!
Please enter your name here