Home ಕರ್ನಾಟಕ ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ: ಸಿ.ಟಿ.ರವಿ

ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ: ಸಿ.ಟಿ.ರವಿ

74
0
CT Ravi

ಬೆಂಗಳೂರು:

ಅಲಹಾಬಾದ್ ಹೈಕೋರ್ಟ್ ಆದೇಶದಂತೆ, ಕರ್ನಾಟಕ ಸರ್ಕಾರ ಕೂಡ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಜಿಹಾದಿಗಳು ನಮ್ಮ ಸಹೋದರಿಯರ ಘನತೆಯನ್ನು ಹಾಳು ಮಾಡುವಾಗ ನಾವು ಮೌನವಾಗಿರುವುದಿಲ್ಲ. ಮತಾಂತರದ ಕೃತ್ಯದಲ್ಲಿ ಭಾಗಿಯಾಗಿರುವವರಿಗೆ ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಾಗಿದೆ ಎಂದು ಸಿ.ಟಿ.ರವಿ ತಿಳಿಸಿದ್ದಾರೆ.

ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ , ಕೇವಲ ಮದುವೆ ಉದ್ದೇಶಕ್ಕಾಗಿ ಮತಾಂತರ ಆಗುವುದನ್ನು ಒಪ್ಪಲಾಗದು ಎಂದು ತೀರ್ಪು ನೀಡಿತ್ತು. ತಮ್ಮ ಮದುವೆ ಬಳಿಕ ಮೂರು ತಿಂಗಳ ರಕ್ಷಣೆ ನೀಡುವಂತೆ ಮನವಿ ಮಾಡಿದ ಜೋಡಿಯೊಂದರ ಅರ್ಜಿಗೆ ಮಧ್ಯಪ್ರವೇಶಿಸಲು ನಿರಾಕರಿಸುತ್ತಾ ಕೋರ್ಟ್ ಈ ತೀರ್ಪು ನೀಡಿತ್ತು.

ಹಿಂದೂ ವ್ಯಕ್ತಿಯ ಜೊತೆ ವಿವಾಹವಾಗುವುದಕ್ಕೆ ಒಂದು ತಿಂಗಳ ಮುಂಚೆ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮುಸ್ಲಿಂ ಮಹಿಳೆಯೊಬ್ಬರು ಈ ಅರ್ಜಿ ಸಲ್ಲಿಸಿದ್ದರು. ತಮ್ಮ ವಿವಾಹದಲ್ಲಿ ಹೆತ್ತವರು ಮಧ್ಯಪ್ರವೇಶಿಸದಂತೆ ನಿರ್ದೇಶಿಸಲು ಕೋರಿ ಅರ್ಜಿ ದಾಖಲಿಸಲಾಗಿತ್ತು.

ಹರ್ಯಾಣದಲ್ಲಿಯೂ ಮತಾಂತರ ನಿಷೇಧ ಕಾಯ್ದೆಯನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಮನೋಹರ್ ಲಾಲ್ ಕಟ್ಟರ್ ಇತ್ತೀಚೆಗೆ ಘೋಷಿಸಿದ್ದರು. ಇದರ ಬೆನ್ನಲ್ಲೇ ಸಿ.ಟಿ.ರವಿ ಈ ಹೇಳಿಕೆ ನೀಡಿದ್ದಾರೆ.

LEAVE A REPLY

Please enter your comment!
Please enter your name here