Home ಕರ್ನಾಟಕ ರಾಜ್ಯೋತ್ಸವ: ಕನ್ನಡದಲ್ಲೇ ಜನತೆಗೆ ಶುಭಾಶಯ ಹೇಳಿದ ಪ್ರಧಾನಿ

ರಾಜ್ಯೋತ್ಸವ: ಕನ್ನಡದಲ್ಲೇ ಜನತೆಗೆ ಶುಭಾಶಯ ಹೇಳಿದ ಪ್ರಧಾನಿ

52
0
bengaluru

ಬೆಂಗಳೂರು:

65ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಜನರಿಗೆ ಕನ್ನಡದಲ್ಲೇ ಶುಭಾಶಯ ಕೋರಿದ್ದಾರೆ.

ಭಾನುವಾರ ಕನ್ನಡದಲ್ಲಿಯೇ ಅವರು ಟ್ವೀಟ್ ಮಾಡಿ,ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಎಂದು ಹೇಳಿದ್ದಾರೆ. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುವುದಾಗಿ ಪಿಎಂ ಹಾರೈಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ರಾಜ್ಯದ ಜನರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ. ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

bengaluru
bengaluru

LEAVE A REPLY

Please enter your comment!
Please enter your name here