Home Uncategorized ರಾಜ್ಯ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

ರಾಜ್ಯ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣ ವಚನ ಸ್ವೀಕಾರ

13
0
bengaluru

ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯ ನಾಯ್ಕ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು. ಬೆಂಗಳೂರು: ಕರ್ನಾಟಕ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ನೇಮಕಗೊಂಡ ರಾಮಚಂದ್ರ ದತ್ತಾತ್ರೇಯ ಹುದ್ದಾರ್ ಹಾಗೂ ವೆಂಕಟೇಶ್ ನಾಯ್ಕ ತಾವರ್ಯ ನಾಯ್ಕ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದರು.

ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಹೈಕೋರ್ಟ್ ನ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು. 

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ,  ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ  ಡಾ.ಮಹೇಶ್ ಜೋಷಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರ ಗಣ್ಯರು, ನ್ಯಾಯಾಧೀಶರು, ಹಿರಿಯ ಅಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಇಂದು ರಾಜಭವನದಲ್ಲಿ ನಡೆದ ಹೆಚ್ಚುವರಿ ನ್ಯಾಯಮೂರ್ತಿಗಳ ಪ್ರಮಾಣವಚನ ಸಂದರ್ಭದಲ್ಲಿ ಭಾಗಿಯಾಗಿ ಶುಭಕೋರಿದೆ‌ನು. pic.twitter.com/ekER68xuY0— Basavaraj S Bommai (@BSBommai) January 24, 2023

LEAVE A REPLY

Please enter your comment!
Please enter your name here