‘ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ಧೋರಣೆ ಹೊಂದಿದೆ’ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಸದಸ್ಯರು ಸೋಮವಾರ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದರು. ಬೆಂಗಳೂರು: ‘ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ರೈತ ವಿರೋಧಿ ಧೋರಣೆ ಹೊಂದಿದೆ’ ಎಂದು ಆರೋಪಿಸಿ ಬಿಜೆಪಿ ರೈತ ಮೋರ್ಚಾ ಸದಸ್ಯರು ಸೋಮವಾರ ರಾಜ್ಯದ ವಿವಿಧೆಡೆ ಪ್ರತಿಭಟನೆ ನಡೆಸಿದರು.
ಮೈಸೂರು, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ತುಮಕೂರು, ಬಳ್ಳಾರಿ, ಕೊಪ್ಪಳ, ಮಂಡ್ಯ, ಹಾವೇರಿ, ಬೀದರ್, ಯಾದಗಿರಿ, ರಾಯಚೂರು, ವಿಜಯನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ ರೈತ ಮೋರ್ಚಾ ಸದಸ್ಯರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ಸರ್ಕಾರ ಎಂದು ತೀವ್ರವಾಗಿ ಕಿಡಿಕಾರಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
11 ಲಕ್ಷ ರೈತರ ಮಕ್ಕಳಿಗೆ ನೀಡಲಾಗುತ್ತಿದ್ದ ರೈತ ವಿದ್ಯಾನಿಧಿ ಶಿಷ್ಯವೇತನವನ್ನು ಸ್ಥಗಿತಗೊಳಿಸಿರುವ ಹಾಗೂ ಎಪಿಎಂಸಿ ಕಾಯ್ದೆಯಲ್ಲಿ ಮಾಡಿರುವ ಬದಲಾವಣೆ ರದ್ದು ಸೇರಿದಂತೆ ಮತ್ತಿತರ ನೀತಿಗಳ ವಿರುದ್ಧ ಪ್ರತಿಭಟನೆ ನಡೆಸಿದರು.