ರಾಮನಗರ, ಫೆ.13: ಸಾಮಾಜಿಕ ಜಾಲತಾಣದಲ್ಲಿ ನ್ಯಾಯಾಧೀಶರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪದಲ್ಲಿ ರಾಮನಗರದ ವಕೀಲರೊಬ್ಬರನ್ನು ಐಜೂರು ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಐಜೂರು ಮೂಲದ ವಕೀಲ ಚಾನ್ ಪಾಷಾ ಬಂಧಿತ ಆರೋಪಿ.
ಜ್ಞಾನವ್ಯಾಪಿ ಮಸೀದಿಯ ನೆಲ ಮಾಳಿಗೆಯಲ್ಲಿ ಹಿಂದೂ ಅರ್ಚಕರ ಕುಟುಂಬಕ್ಕೆ ಪೂಜೆ ಸಲ್ಲಿಸಲು ಅವಕಾಶ ಕಲ್ಪಿಸಿಕೊಟ್ಟ ಉತ್ತರ ಪ್ರದೇಶದ ವಾರಣಾಸಿ ಜಿಲ್ಲಾ ನ್ಯಾಯಾಧೀಶರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ ಆರೋಪ ವಕೀಲ ಚಾನ್ ಪಾಷಾ ಮೇಲಿದೆ. ಈ ಬಗ್ಗೆ ಚಾನ್ ಪಾಷಾ ವಿರುದ್ಧ ಸಂಘ ಪರಿವಾರವು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ಸಲ್ಲಿಸಿತ್ತು. ದೂರಿನ ಹಿನ್ನೆಲೆಯಲ್ಲಿ ಐಜೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಚಾನ್ ಪಾಷಾರನ್ನು ಸೋಮವಾರ ತಡರಾತ್ರಿ ಪೊಲೀಸರು ಬಂಧಿಸಿದ್ದಾರೆಂದು ತಿಳಿದುಬಂದಿದೆ.