Home Uncategorized ರಾಮನಗರ: ಬೈಕ್​​ ವ್ಹೀಲಿಂಗ್​​ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಲಾಂಗ್‌ನಿಂದ ಹಲ್ಲೆ

ರಾಮನಗರ: ಬೈಕ್​​ ವ್ಹೀಲಿಂಗ್​​ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಲಾಂಗ್‌ನಿಂದ ಹಲ್ಲೆ

1
0
bengaluru

ರಾಮನಗರ: ಬೈಕ್​​ ವ್ಹೀಲಿಂಗ್ (bike wheeling) ​ ಪ್ರಶ್ನಿಸಿದ್ದಕ್ಕೆ ಯುವಕನ ಮೇಲೆ ಲಾಂಗ್‌ನಿಂದ ಹಲ್ಲೆ (Assault)  ಮಾಡಿರುವಂತಹ ಘಟನೆ ತಾಲೂಕಿನ ಅಚ್ಚಲುದೊಡ್ಡಿ ಬಳಿ 5-6 ಯುವಕರಿಂದ ಕೃತ್ಯವೆಸಗಲಾಗಿದೆ. ಸ್ವಾಮಿ ಎಂಬಾತನಿಗೆ ಗಂಭೀರ ಗಾಯವಾಗಿದ್ದು. ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರೊಚ್ಚಿಗೆದ್ದ ಅಚ್ಚಲುದೊಡ್ಡಿ ಗ್ರಾಮಸ್ಥರು ಬೈಕ್​​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಮನಗರ ಗ್ರಾಮಾಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಗಾಂಜಾ ಮಾರುತ್ತಿದ್ದ ಮೂವರ ಬಂಧನ ಮಾಡಲಾಗಿದೆ. ಶಿರಸಿ ಶಾಂತಿನಗರದ ವಿನಾಯಕ್​(39), ಗಣೇಶನಗರದ ನಿಖಿಲ್(26) ಮತ್ತು ಭಟ್ಕಳ ಮೂಲದ ಸಮಿ ಅಬ್ಬಾಸ್ ಮಲ್ವಾ(40) ಬಂಧಿತರು. 1.25 ಲಕ್ಷ ಮೌಲ್ಯದ 4.76 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಟೈರ್ ಸ್ಫೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿ, ಮಹಿಳೆ ಸಾವು

ಗದಗ: ಟೈರ್ ಸ್ಫೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಕಲಕೇರಿ ಗ್ರಾಮದ ಬಳಿ ನಡೆದಿದೆ. ಇನ್ನು ಘಟನೆಯಲ್ಲಿ ಎಂಟು ಪ್ರಯಾಣಿಕರಿಗೆ ಗಾಯವಾಗಿದ್ದು, ಮುಂಡರಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಮುಂಡರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ: Gadag: ಅತಿಥಿ ಶಿಕ್ಷಕನಿಂದ ವಿದ್ಯಾರ್ಥಿಯ ಕೊಲೆ, ಶಿಕ್ಷಕಿ ಮೇಲೆ ಹಲ್ಲೆ ಪ್ರಕರಣ: ಆರೋಪಿ ಮುತ್ತಪ್ಪನ ಬಂಧನ

bengaluru

ಲಾರಿ ಡಿಕ್ಕಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು

ದಾವಣಗೆರೆ: ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವಂತಹ ಘಟನೆ ನೆಲಮಂಗಲದ ಬಳಿ ನಡೆದಿದೆ. ದಾವಣಗೆರೆ ನಗರದ ನಿಟ್ಟುವಳ್ಳಿ ಹೊಸ ಬಡಾವಣೆ ನಿವಾಸಿ ಹರೀಶ್ (22) ಸಾವನ್ನಪ್ಪಿದ ಬೈಕ್ ಸವಾರ. ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲ್ಸಕ್ಕೆ ಸೇರಿದ್ದ. ದಾವಣಗೆರೆಯಿಂದ ಬೆಂಗಳೂರಿಗೆ ಬೈಕ್ ಮೇಲೆ ಹೋಗುತ್ತಿರುವಾಗ ದುರ್ಘಟನೆ ಸಂಭವಿಸಿದೆ. ಬಾಲ್ಯದಲ್ಲಿಯೇ ತಂದೆಯನ್ನ ಕಳೆದುಕೊಡಿದ್ದ ಹರೀಶ್, ತಾಯಿ ಕಿರಿಯ ಸಹೋದರನ ಜೊತೆ ನಿಟ್ಟುವಳ್ಳಿ ಹೊಸ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸಗಿದ್ದ. ಶವ ಮನೆಗೆ ಬರುತ್ತಿದ್ದಂತೆ ಕುಟುಂಬ ಸದಸ್ಯರ ಅಕ್ರಂದನ ಮುಗಿಲು ‌ಮುಟ್ಟಿದೆ.

ಬೆಂಗಳೂರು: ಅನ್ನ ಹಾಕಿದ ಕಂಪನಿಗೆ ಕನ್ನ ಹಾಕಿದ ಭೂಪ

ಬೆಂಗಳೂರು: ಕೆಲಸ ಮಾಡುತ್ತಿದ್ದ ಕಂಪನಿಯಲ್ಲೇ ಒಳ್ಳೆಯವನಂತೆ ನಟಿಸಿ ಕಳ್ಳತನ ಮಾಡಿದ ನೌಕರ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ವಿನಯ್ ಎಂಬಾತ ಓಗೋ (VOGO Bike) ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ಬೈಕ್​ನ ಜಿಪಿಎಸ್ ಸಿಸ್ಟಂ ಸೇರಿ ಕಂಪನಿ ವ್ಯವಸ್ಥೆ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡಿದ್ದ ಈತ 8 ತಿಂಗಳ ಹಿಂದೆ ಕೆಲಸ ಬಿಟ್ಟು ಮನೆಯಲ್ಲೇ ನೆಲೆಸಿದ್ದನು. ಇದೇ ವೇಳೆ ಐಷಾರಾಮಿ ಜೀವನಕ್ಕಾಗಿ ತನಗೆ ಅನ್ನ ಕೊಟ್ಟ ಕಂಪನಿಯ ಮೇಲೆ ಕಣ್ಣು ಹಾಕಿದ್ದಾನೆ.

ಇದನ್ನೂ ಓದಿ: Crime News: ಪತಿ ಅಗಲಿಕೆ ನೋವಿನಿಂದ ಮನನೊಂದು ಪತ್ನಿಯೂ ನೇಣಿಗೆ ಶರಣು

ಕೆರೆಯಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾವು

ಚಿತ್ರದುರ್ಗ: ಕೆರೆಯಲ್ಲಿ ಮುಳುಗಿ (drown) ತಾಯಿ ಮತ್ತು ಇಬ್ಬರು ಮಕ್ಕಳು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ನಡೆದಿದೆ. ದುರ್ಗಮ್ಮ(25), ಮಗ ಅಜ್ಜಯ್ಯ(6), ಪುತ್ರಿ ಸೇವಂತಿ(4) ಮೃತರು. ಚಳ್ಳಕೆರೆ ತಾಲೂಕಿನ ಹಿರೇಹಳ್ಳಿಯ ನಿವಾಸಿಗಳು. ಬೋಸೇದೇವರಹಟ್ಟಿ ಜಾತ್ರೆಗೆಂದು ಸಂಬಂಧಿಕರ ಮನೆಗೆ ಪತಿ ಮಹಾಂತೇಶ ಕರೆತಂದಿದ್ದರು. ಈ ವೇಳೆ ಗಂಗಾ ಪೂಜೆಗೆಂದು ನಾಯಕನಹಟ್ಟಿ ಹಿರೇಕೆರೆಗೆ ಮಹಾಂತೇಶ ಕರೆದುಕೊಂಡು ಹೋಗಿದ್ದಾರೆ. ಪತ್ನಿ ಮತ್ತು ಮಕ್ಕಳನ್ನು ಕೆರೆ ನೀರಿಗೆ ತಳ್ಳಿ ಪತಿಯೇ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಪತಿ ಮಹಾಂತೇಶನನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಹಿರೇಕೆರೆಯಲ್ಲಿ ಶವಗಳಿಗಾಗಿ ಅಗ್ನಿಶಾಮಕ ದಳ ಶೋಧ ಆರಂಭಿಸಿದೆ. ನಾಯಕನಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

bengaluru

LEAVE A REPLY

Please enter your comment!
Please enter your name here