Home Uncategorized ರಾಷ್ಟ್ರೀಯ ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…' ಹಾಡು ಹಾಡಿದ ಸಚಿವ ಪ್ರಹ್ಲಾದ್​ ಜೋಶಿ

ರಾಷ್ಟ್ರೀಯ ಯುವಜನೋತ್ಸವ: 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು…' ಹಾಡು ಹಾಡಿದ ಸಚಿವ ಪ್ರಹ್ಲಾದ್​ ಜೋಶಿ

4
0
bengaluru

ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್​ಕುಮಾರ್​ ಅವರ ಜನಪ್ರಿಯ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು. ಧಾರವಾಡ: ರಾಷ್ಟ್ರೀಯ ಯುವಜನೋತ್ಸವದಲ್ಲಿ ಡಾ.ರಾಜ್​ಕುಮಾರ್​ ಅವರ ಜನಪ್ರಿಯ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಹಾಡನ್ನು ಹಾಡುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಅವರು ಭಾನುವಾರ ಸ್ಥಳದಲ್ಲಿ ನೆರೆದಿದ್ದವರ ಗಮನ ಸೆಳೆದರು.

ಧಾರವಾಡದ ಕೆಸಿಡಿ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಯುವಜನೋತ್ಸವದಲ್ಲಿ ಆಲ್​ ಒಕೆ ತಂಡಕ್ಕೆ ಜೋಶಿ ನೆನಪಿನ ಕಾಣಿಕೆ‌ ಕೊಡಲು ವೇದಿಕೆ ಮೇಲೆ ಆಗಮಿಸಿದ್ದರು.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ 26ನೇ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ಮೋದಿ ಚಾಲನೆ

ಈ ವೇಳೆ ತಂಡದ ಸದಸ್ಯರು ಅವರನ್ನು ಹಾಡಲು ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಜೋಶಿಯವರು, ‘ನಾನು ವೇದಿಕೆ ಮೇಲೆ ಮೆಮೆಂಟೊ ಕೊಡಲು ಬಂದಿದ್ದೆ. ಆದರೆ, ನನಗೆ ಹಾಡಬೇಕೆಂಬ ಪನಿಶ್​ಮೆಂಟ್​ ಕೊಡುತ್ತಿದ್ದಾರೆ’ ಎಂದು ಹೇಳಿದರು. ನಂತರ ಗಾಯಕರೊ ಜೊತೆಗೂಡಿ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಹಾಡನ್ನು ಸಂತಸದಿಂದ ಹಾಡಿದರು.

bengaluru

“ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು..”
An anthem song that would make any Kannadiga want to dance with pride.

I thoroughly enjoyed participating at the #NationalYouthDay celebration & couldn’t just stand still while our beloved shri @JoshiPralhad ji sang this song. pic.twitter.com/P9PEKWhW1k
— Arvind Bellad (@BelladArvind) January 16, 2023

ಧಾರವಾಡದಲ್ಲಿ ಅದ್ದೂರಿಯಾಗಿ ನಡೆಯುತ್ತಿರುವ ಯುವಜನೋತ್ಸವ ಕಾರ್ಯಕ್ರಮ ಇಂದು ಕೊನೆಗೊಳ್ಳಲಿದೆ. ಬೆಳಗ್ಗೆ 10 ಗಂಟೆಗೆ ಕೆಸಿಡಿ ಮೈದಾನದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್​ ಆಗಮಿಸುತ್ತಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಹಾಗು ಅನುರಾಗ್ ಸಿಂಗ್ ಠಾಕೂರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ್ ಹಾಲಪ್ಪ ಬಸಪ್ಪ, ಸಚಿವ ಶಂಕರಪಾಟೀಲ್ ಮುನೇನಕೊಪ್ಪ ಪಾಲ್ಗೊಳ್ಳಲಿದ್ದಾರೆ.

bengaluru

LEAVE A REPLY

Please enter your comment!
Please enter your name here