ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಪ್ರಕಾರಗಳಲ್ಲಿ ಇದುವರೆಗೆ ಸುಮಾರು 704 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸ ಬೇಕೆಂಬ ಉದ್ದೇಶದಿಂದ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ 2024ರ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.೫೦ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ದೂ. ಸಂಖ್ಯೆ :080-22107705, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ಲೈನ್ನಲ್ಲಿ -www.kannadapustakapradhikara.com- ಕೂಡ ಶೇ.50ರ ರಿಯಾಯಿತಿ ಸೌಲಭ್ಯ ಲಭ್ಯವಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
