ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಸಹಿತ ಇತರೆ ಮೂವರು ಆರೋಪಿಗಳಿಗೆ ನಗರದ 42ನೆ ಎಸಿಎಂಎಂ ನ್ಯಾಯಾಲಯ ಜುಲೈ 4ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಶನಿವಾರ ಆದೇಶ ಹೊರಡಿಸಿದೆ.
ದರ್ಶನ್ ಹಾಗೂ ಇತರೆ ಮೂವರ ಕಸ್ಟಡಿ ಅವಧಿ ಶನಿವಾರ ಮುಗಿದಿರುವ ಹಿನ್ನೆಲೆ ಪೊಲೀಸರು ಆವರನ್ನು ನ್ಯಾಯಾಲಯಕ್ಕೆ ಕರೆದೊಯ್ದಿದ್ದಾರೆ. ದರ್ಶನ್, ವಿನಯ್, ಪ್ರದೂಶ್ ಹಾಗೂ ಧನ್ ರಾಜ್ ಗೆ ಜುಲೈ 4ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
