Home Uncategorized ರೈತರ ದಿಲ್ಲಿ ಚಲೋ ಪ್ರತಿಭಟನೆ: ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ

ರೈತರ ದಿಲ್ಲಿ ಚಲೋ ಪ್ರತಿಭಟನೆ: ಹರ್ಯಾಣಾದ ಶಂಭು ಗಡಿಯಲ್ಲಿ ರೈತರ ಮೇಲೆ ಅಶ್ರುವಾಯು ಪ್ರಯೋಗ

11
0

ಹೊಸದಿಲ್ಲಿ: ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜಧಾನಿ ದಿಲ್ಲಿಯತ್ತ ಹೊರಟಿರುವ ಸಾವಿರಾರು ರೈತರು ಪಂಜಾಬ್‌ ಮತ್ತು ಹರ್ಯಾಣ ನಡುವಿನ ಶಂಭು ಗಡಿಯಲ್ಲಿ ಸೇರುತ್ತಿದ್ದಂತೆಯೇ ಪೊಲೀಸರು ಅವರತ್ತ ಅಶ್ರುವಾಯು ಪ್ರಯೋಗಿಸಿ ಪ್ರತಿಭಟನಾನಿರತರನ್ನು ಚದುರಿಸುವ ಯತ್ನ ಮಾಡಿದ್ದಾರೆ.

ಕೇಂದ್ರ ಸರ್ಕಾರದ ವಿರುದ್ಧ ರೈತರ ಈ ಬೃಹತ್‌ ದಿಲ್ಲಿ ಚಲೋ ಯಾತ್ರೆಯನ್ನು ತಡೆಯಲು ರಾಜಧಾನಿ ದಿಲ್ಲಿಯಲ್ಲಿ ಈಗಾಗಲೇ ಪೊಲೀಸರು ವ್ಯಾಪಕ ವ್ಯವಸ್ಥೆಯನ್ನು ಮಾಡಿದ್ದು ದಿಲ್ಲಿಯ ಗಡಿಗಳಾದ ಸಿಂಘು, ಟಿಕ್ರಿ ಮತ್ತು ಯಪಿ ಗೇಟ್‌ ಅನ್ನು ಸೀಲ್‌ ಮಾಡಿದ್ದಾರೆ. ಹಲವೆಡೆ ಕಾಂಕ್ರೀಟ್‌ ಗೋಡೆಗಳು ಮತ್ತು ತಂತಿಗಳನ್ನು ಅಳವಡಿಸಲಾಗಿದ್ದು ಈ ಮೂಲಕ ರೈತರು ದಿಲ್ಲಿ ಪ್ರವೇಶಿಸುವುದನ್ನು ತಡೆಯುವ ಯತ್ನ ಮಾಡಲಾಗಿದೆ.

#WATCH | Police fire tear gas to disperse protesting farmers at Punjab-Haryana Shambhu border. pic.twitter.com/LNpKPqdTR4

— ANI (@ANI) February 13, 2024

#WATCH | Police fire tear gas to disperse protesting farmers at Punjab-Haryana Shambhu border.

The protesters are demanding a law guaranteeing MSP for crops. pic.twitter.com/TRCI8gZ2M9

— ANI (@ANI) February 13, 2024

LEAVE A REPLY

Please enter your comment!
Please enter your name here