ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಬೆಂಗಳೂರು: ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಭ್ರಷ್ಟಾಚಾರ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಅಕ್ರಮ ಆಸ್ತಿ ಸಾಬೀತುಪಡಿಸುವಲ್ಲಿ ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ಲೇಔಟ್‌ನ ಅಂದಿನ ಪೊಲೀಸ್ ಇನ್ಸ್‌ಪೆಕ್ಟರ್ ಬಿ ರಾಮಕೃಷ್ಣ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
2019ರ ಫೆ.18ರಂದು ಸೆಷನ್ಸ್ ನ್ಯಾಯಾಲಯವು ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು 30 ಲಕ್ಷ ರೂ. ದಂಡವನ್ನು ವಿಧಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಮಕೃಷ್ಣ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಪುರಸ್ಕರಿಸಿದರು.
ವಿಚಾರಣೆ ವೇಳೆ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ತಳ್ಳಿಹಾಕಿದ ಹೈಕೋರ್ಟ್, ಮೇಲ್ಮನವಿದಾರರ ಆದಾಯ 31.35 ಲಕ್ಷ ರೂ ಆಗಿದ್ದು, ಅವರ ಆಸ್ತಿ 20.44 ಲಕ್ಷ ರೂ ಆಗಿದೆ. ಆಸ್ತಿಗಿಂತಲೂ ಆದಾಯ ಹೆಚ್ಚಾಗಿದೆ. ಹೀಗಾಗಿ ಇಲ್ಲಿ ಅಕ್ರಮ ಆಸ್ತಿಗಳು ಪತ್ತೆಯಾಗಿಲ್ಲ. ಪ್ರಕರಣ ಸಂಬಂಧ ಇಲಾಖಾ ವಿಚಾರಣೆಯಲ್ಲಿ ಆರೋಪಿಯನ್ನು ಆರೋಪಗಳಿಂದ ಮುಕ್ತಗೊಳಿಸಲಾಗಿದ್ದು, ಆರೋಪಿಗೆ ಶಿಕ್ಷೆ ವಿಧಿಸಲಾಗುವುದಿಲ್ಲ ಎಂದು ನ್ಯಾಯಾಲಯ ತಿಳಿಸಿದೆ.