Home Uncategorized ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ

ಲಂಚ ಪ್ರಕರಣ: ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಲೋಕಾಯುಕ್ತ ಸಿದ್ಧತೆ

25
0

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ. ಬೆಂಗಳೂರು: ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧ ಮತ್ತೊಂದು ಪ್ರಕರಣ ದಾಖಲಿಸಲು ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಪ್ರಕರಣದ ಪ್ರಮುಖ ಆರೋಪಿ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಪಡೆದಿರುವುದಕ್ಕೆ ಲೋಕಾಯುಕ್ತ ಅಧಿಕಾರಿಗಳು ಅಸಮಾಧಾನಗೊಂಡಿದ್ದು, ಪ್ರಕರಣದ ಎರಡನೇ ಆರೋಪಿಯಾಗಿರುವ ಪುತ್ರ ಪ್ರಶಾಂತ್ ಮಾಡಾಳ್ ಜೈಲು ಪಾಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಶಾಸಕನಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಲೋಕಾಯುಕ್ತ ಈಗಾಗಲೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಮತ್ತೊಂದೆಡೆ ಮೊದಲಿಗೆ ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆಗೆ ನಿರಾಕರಿಸಿತ್ತು. 

ಲಂಚ ಪ್ರಕರಣದ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ದಿನಬೆಳಗಾಗುವುದರೊಳಗೆ ವಿಚಾರಣೆ ನಡೆಸಿ ಮಾನ್ಯ ಮಾಡಿರುವ ನ್ಯಾಯಾಂಗ ಪ್ರಕ್ರಿಯೆಗೆ ಬೆಂಗಳೂರು ವಕೀಲರ ಸಂಘ ತೀವ್ರ ಆಘಾತ ವ್ಯಕ್ತಪಡಿಸಿದೆ. 

ಈ ಕುರಿತಂತೆ ತುರ್ತು ಸಭೆ ನಡೆಸಿದ ಸಂಘದ ಅಧ್ಯಕ್ಷ ವಿವೇಕ್‌ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ. ರವಿ ಮತ್ತು ಖಜಾಂಚಿ ಎಂ.ಟಿ.ಹರೀಶ್ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌ ಅವರಿಗೆ ಪತ್ರವೊಂದನ್ನು ಬರೆದಿದ್ದು, ಸಾಮಾನ್ಯ ವ್ಯಕ್ತಿ ಮತ್ತು ವಿಐಪಿಗೆ ಒಂದೇ ರೀತಿಯ ನ್ಯಾಯ ನೀಡಬೇಕು ಎಂದು ಕೋರಿದೆ.

ಇದನ್ನೂ ಓದಿ: ಮಾಡಾಳ್ ವಿರೂಪಾಕ್ಷಪ್ಪ ಮಧ್ಯಂತರ ಜಾಮೀನು ವಿರುದ್ಧ ಕರ್ನಾಟಕ ಲೋಕಾಯುಕ್ತ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ

ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ. ಮಾಡಾಳ್ ವಿರೂಪಾಕ್ಷಪ್ಪ ಅವರ ರಾಜ್ಯ ಮತ್ತು ದೇಶದ ಇತರ ಭಾಗಗಳಲ್ಲಿನ ಆಸ್ತಿಗಳ ಕುರಿತು ಲೋಕಾಯುಕ್ತ ಅಧಿಕಾರಿಗಳು ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ ಎಂದು ಮೂಲಗಳು ವಿವರಿಸಿವೆ. ಅಕ್ರಮ ಸಂಪತ್ತಿನ ಬಗ್ಗೆ ಪುರಾವೆಗಳನ್ನು ಪಡೆದ ನಂತರ, ಅವರ ವಿರುದ್ಧ ಮತ್ತೊಂದು ದೂರು ದಾಖಲಿಸುತ್ತಾರೆ ಎಂದು ಮೂಲಗಳು ಖಚಿತಪಡಿಸಿವೆ.

ಪ್ರಶಾಂತ್ ಮಾಡಾಳ್ ತನ್ನ ತಂದೆಯ ಪರವಾಗಿ ಪ್ರಸಿದ್ಧ ‘ಮೈಸೂರು ಸ್ಯಾಂಡಲ್ ಸೋಪ್’ ತಯಾರಿಸುವ ಸಾರ್ವಜನಿಕ ವಲಯದ ಕಂಪನಿಯಾದ ಕೆಎಸ್‌ಡಿಎಲ್‌ಗೆ ಕಚ್ಚಾ ಸಾಮಗ್ರಿಗಳನ್ನು ಖರೀದಿಸಲು ಟೆಂಡರ್ ಮಂಜೂರು ಮಾಡಲು 40 ಲಕ್ಷ ರೂಪಾಯಿ ನಗದು ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. 

ಇದನ್ನೂ ಓದಿ: ಭ್ರಷ್ಟಾಚಾರ ಪ್ರಕರಣ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿಚಾರಣೆ; ಪುತ್ರನ ವಿರುದ್ಧ ಮತ್ತೆರಡು ಎಫ್ಐಆರ್ ದಾಖಲು

ಕೆಎಸ್‌ಡಿಎಲ್‌ನ ಅಧ್ಯಕ್ಷರಾಗಿದ್ದ ಶಾಸಕ ವಿರೂಪಾಕ್ಷಪ್ಪ ಅವರು ಘಟನೆಯ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆರೋಪಿ ಬಿಜೆಪಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ಮಾಡಾಳ್ ಅವರ ನಿವಾಸದಲ್ಲಿ ಅಧಿಕಾರಿಗಳು 8.12 ಕೋಟಿ ರೂಪಾಯಿ ಮತ್ತು 1.6 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here