ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ದ ಸದಾಶಿವ ನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿರುವ ಬಗ್ಗೆ ವರದಿಯಾಗಿದೆ.
ಸಂತ್ರಸ್ಥ ಬಾಲಕಿಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವಗರ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು, ಪೋಕ್ಸೋ ಕೇಸ್ ನಲ್ಲಿ ಆಂಟಿಸಿಪೇಟರಿ ಬೇಲ್ ಸಿಗುವ ಅವಕಾಶ ಇಲ್ಲದ ಕಾರಣ ಯಡಿಯೂರಪ್ಪ ಅವರ ಬಂಧನಕ್ಕೆ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸಹಾಯ ಪಡೆಯಲು ಹೋಗಿದ್ದಾಗ ಈ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಸಂತ್ರಸ್ತ ಬಾಲಕಿಯ ತಾಯಿ ಆರೋಪಿಸಿದ್ದಾರೆ.
“ತನ್ನ ಮಗಳ ಮೇಲೆ ನಡೆದ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ ಐಟಿ ಗೆ ವಹಿಸುವಂತೆ ಆಗ್ರಹಿಸಿ ಫೆಬ್ರವರಿ 2 ರಂದು ಯಡಿಯೂರಪ್ಪ ಅವರ ಬಳಿ ತಾನು ಮತ್ತು ಮಗಳು ತೆರಳಿದ್ದ ವೇಳೆ ಲೈಂಗಿಕ ದೌರ್ಜನ್ಯದ ಘಟನೆ ನಡೆದಿದೆ ಎಂದು 17 ವರ್ಷದ ಅಪ್ರಾಪ್ತೆಯ ತಾಯಿ, ಬೆಂಗಳೂರಿನ ಪೋಲಿಸರಿಗೆ ದೂರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
