ಶಿವಮೊಗ್ಗ: ಲೋಕಸಭಾ ಟಿಕೆಟ್ ಹಂಚಿಕೆ ವಿಚಾರವಾಗಿ ನಾಡಿದ್ದು ದಿಲ್ಲಿಯಲ್ಲಿ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಭಾಗವಹಿಸಲು ಹೋಗುತ್ತಿದ್ದೇನೆ. ಅಂದಿನ ಸಭೆಯ ನಂತರ ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಕೂಡ ಅಂತಿಮವಾಗಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡಿದ್ದು ನಡೆಯುವ ಸಭೆಯಲ್ಲಿ ಕರ್ನಾಟಕದ 28 ಕ್ಷೇತ್ರಗಳ ಪಟ್ಟಿ ಬಹುತೇಕ ಫೈನಲ್ ಆಗಬಹುದು ಎಂದು ತಿಳಿಸಿದರು.
ಹೊಸಬರಿಗೆ ಆದ್ಯತೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ದಿಲ್ಲಿ ನಾಯಕರ ಮನಸ್ಸಿನಲ್ಲಿ ಏನಿದೆಯೋ ಗೊತ್ತಿಲ್ಲ. ಅವರ ತೀರ್ಮಾನವೇ ಅಂತಿಮ. ಬಿಜೆಪಿ ಜೆಡಿಎಸ್ ಹೊಂದಾಣಿಕೆ ನಿಶ್ಚಿತ. ಆದರೆ ಸ್ಥಾನದ ಬಗ್ಗೆ ಅಂತಿಮವಾಗಿಲ್ಲ. ಮಂಡ್ಯದಿಂದ ಸುಮಲತಾ ಸ್ಪರ್ಧೆ ಬಗ್ಗೆ ಯಾವುದೇ ಸ್ಪಷ್ಟವಾದ ಮಾಹಿತಿ ಇಲ್ಲ ಎಂದರು.
ಎಫ್ಎಸ್ಎಲ್ ವರದಿ ವಿಚಾರವಾಗಿ ಮಾತನಾಡಿದ ಅವರು, ʼಸರಕಾರ ಎಫ್ಎಸ್ಎಲ್ ವರದಿಯನ್ನು ತಕ್ಷಣ ಬಿಡುಗಡೆಗೊಳಿಸಬೇಕು. ವರದಿಯನ್ನು ಏಕೆ ಬಚ್ಚಿಟ್ಟುಕೊಂಡಿದ್ದಾರೋ ಗೊತ್ತಿಲ್ಲ. ವಾಸ್ತವಿಕ ಸಂಗತಿ ದೇಶ ಹಾಗೂ ರಾಜ್ಯದ ಜನರಿಗೆ ಗೊತ್ತಾಗಬೇಕು. ವಿಳಂಬವಾದರೆ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆʼ ಎಂದರು.