Home Uncategorized ಲೋಕಸಭಾ ಚುನಾವಣೆ 2024: ಎಲ್ಲಾ 28 ಸ್ಥಾನಗಳಲ್ಲೂ ಬೂತ್ ಮಟ್ಟದಲ್ಲಿ ಪ್ರಚಾರ ನಡೆಸಲು ಬಿಜೆಪಿ ಮುಂದು!

ಲೋಕಸಭಾ ಚುನಾವಣೆ 2024: ಎಲ್ಲಾ 28 ಸ್ಥಾನಗಳಲ್ಲೂ ಬೂತ್ ಮಟ್ಟದಲ್ಲಿ ಪ್ರಚಾರ ನಡೆಸಲು ಬಿಜೆಪಿ ಮುಂದು!

5
0
Advertisement
bengaluru

ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳಷ್ಟೇ ಬಾಕಿ ಉಳಿದಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಲೋಕಸಭಾ ಚುನಾವಣೆ ಮೂಲಕ ಪುಟಿದೇಳಲು ಸಿದ್ಧತೆಗಳ ಆರಂಭಿಸಿದೆ. ಬೆಂಗಳೂರು: ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳಷ್ಟೇ ಬಾಕಿ ಉಳಿದಿದ್ದು, ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿರುವ ಬಿಜೆಪಿ ಲೋಕಸಭಾ ಚುನಾವಣೆ ಮೂಲಕ ಪುಟಿದೇಳಲು ಸಿದ್ಧತೆಗಳ ಆರಂಭಿಸಿದೆ.

ಮೇರಾ ಬೂತ್ ಸಬ್ಸೆ ಮಜ್ಬೂತ್ (ನನ್ನ ಬೂತ್ ಇತರೆ ಬೂತ್ ಗಳಿಗಿಂತಲೂ ಬಲಿಷ್ಠ) ಎಂಬ ಶೀರ್ಷಿಕೆ ಅಡಿಯಲ್ಲಿ ಎಲ್ಲಾ 28 ಸ್ಥಾನಗಳಲ್ಲೂ ಬೂತ್ ಮಟ್ಟದಲ್ಲಿ ಪ್ರಚಾರ ನಡೆಸಲು ಸಿದ್ಧತೆಗಳನ್ನು ನಡೆಸುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಅವರು, ಮಂಡಲದ ಪದಾಧಿಕಾರಿಗಳು ಮತ್ತು ವಿವಿಧ ಮೋರ್ಚಾಗಳ ಮುಖ್ಯಸ್ಥರು ರಾಜ್ಯದ ಸುಮಾರು 300 ಕೇಂದ್ರಗಳಲ್ಲಿ ಜನರನ್ನು ಸಂಪರ್ಕಿಸಲಿದ್ದಾರೆ.  ಜೂನ್ 27 ರಿಂದ ಮುಂದಿನ ಒಂದು ವಾರದವರೆಗೆ ಮನೆ-ಮನೆಗೆ ಭೇಟಿ ನೀಡಲಿದ್ದಾರೆಂದು ಹೇಳಿದ್ದಾರೆ.

ಭೇಟಿ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಲವು ಸಾಧನೆಗಳನ್ನು ಜನರಿಗೆ ವಿವರಿಸಲಾಗುವುದು. ಪ್ರತಿ ವ್ಯಕ್ತಿಗೆ 5 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸುವುದು ಸೇರಿದಂತೆ ಕೇಂದ್ರ ಸರ್ಕಾರದ ಮಹತ್ತರವಾದ ಯೋಜನೆಗಳ ಬಗ್ಗೆ ಕಾರ್ಯಕರ್ತರು ಜನರಿಗೆ ಮಾಹಿತಿ ನೀಡುತ್ತಾರೆ. ಬೂತ್ ಮಟ್ಟದ ಅಭಿಯಾನವು ಮೋದಿಜಿಯವರ ಒಂಬತ್ತು ವರ್ಷಗಳ ಅಧಿಕಾರವನ್ನು ಗುರುತಿಸುವಂತೆ ಮಾಡಲಿದೆ ಎಂದು ತಿಳಿಸಿದ್ದಾರೆ.

bengaluru bengaluru

ಇದೇ ವೇಳೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವನ್ನು ಲೇವಡಿ ಮಾಡಿದ ಅವರು, “ಕಾಂಗ್ರೆಸ್ ಸರ್ಕಾರವು ಅರ್ಜಿ ಸಲ್ಲಿಸುವಂತೆ ಒತ್ತಾಯಿಸಿದಂತೆ ಕೋವಿಡ್ ಲಸಿಕೆ, ಪಡಿತರ ಅಕ್ಕಿ, ಗ್ಯಾಸ್ ಮತ್ತು ಶೌಚಾಲಯಗಳಿಗೆ ಅರ್ಜಿ ಸಲ್ಲಿಸಿ ಎಂದು ನಾವು ಹೇಳಲಿಲ್ಲ. ಬಿಜೆಪಿ ಕೇಂದ್ರ ಸರ್ಕಾರದಿಂದ ಅಕ್ಕಿ ನೀಡಲಾಗುತ್ತಿದೆ. 5 ಕೆಜಿ ಉಚಿತ ಅಕ್ಕಿಯನ್ನು ನೀಡುವುದನ್ನು ಇದೇ ರೀತಿ ಮುಂದುವರಿಸಲಾಗುತ್ತದೆ ಎಂದರು.

ಜನರಿಗೆ ಕೇವಲ ಹತ್ತು ಅಲ್ಲ, 15 ಕೆಜಿ ಅಕ್ಕಿ ನೀಡಿ. ನಿರುದ್ಯೋಗ ಭತ್ಯೆಯನ್ನು 2022-23ರ ನಿರುದ್ಯೋಗಿ ಯುವಕರಿಗೆ ಮಾತ್ರವಲ್ಲದೆ, ಎಲ್ಲಾ ನಿರುದ್ಯೋಗಿಗಳಿಗೂ ನೀಡಿ. “ನಾವು ಸೋತಿದ್ದೇವೆ, ಆದರೆ ಸೋಲು ಹೆಚ್ಚು ಕಾಲ ಉಳಿಯಬಾರದು ಎಂದು ಹೇಳಿದರು.

ಲೋಕಸಭಾ ಚುನಾವಣೆ ವೇಳೆ ರಾಜ್ಯದ ಎಲ್ಲಾ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿಯೊಂದಿಗೆ ರಾಜ್ಯಾದ್ಯಂತ ಜಿಲ್ಲಾ ಕಾರ್ಯಕರ್ತರ ಸಭೆ ನಡೆಸಲಾಗುವುದು. ಮೋದಿಯವರು ನೇರವಾಗಿ ಆನ್‌ಲೈನ್‌ ಮೂಲಕ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಸಂದರ್ಭದಲ್ಲಿ ಪ್ರತಿ ಬೂತ್ ನಲ್ಲೂ ಪರದೆಗಳನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.


bengaluru

LEAVE A REPLY

Please enter your comment!
Please enter your name here