Home Uncategorized ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣಕ್ಕೆ ನಮ್ಮ ಬಳಿ ದಾಖಲೆ ಇದೆ, ವಾಪಸ್ ಪಡೆಯುತ್ತೇವೆ: ಮಾಡಾಳ್...

ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಹಣಕ್ಕೆ ನಮ್ಮ ಬಳಿ ದಾಖಲೆ ಇದೆ, ವಾಪಸ್ ಪಡೆಯುತ್ತೇವೆ: ಮಾಡಾಳ್ ವಿರೂಪಾಕ್ಷಪ್ಪ

18
0

ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿ ಮನೆಯಲ್ಲಿ.. ದಾವಣಗೆರೆ: ಲೋಕಾಯುಕ್ತ ದಾಳಿಯ ನಂತರ ನಾಪತ್ತೆಯಾಗಿದ್ದ ಬಿಜೆಪಿ ಶಾಸಕ ಹಾಗೂ ಕೆಎಸ್‌ಡಿಎಲ್‌ ಮಾಜಿ ಅಧ್ಯಕ್ಷ ಮಾಡಾಳ್‌ ವಿರೂಪಾಕ್ಷಪ್ಪ ಅವರಿಗೆ ಮಂಗಳವಾರ ಹೈಕೋರ್ಟ್‌ ನಿರೀಕ್ಷಣಾ ಜಾಮೀನು ನೀಡಿದ್ದು, ಜಾಮೀನು ಸಿಕ್ಕ ಬೆನ್ನಲ್ಲೇ ಚೆನ್ನಗಿರಿಯ ಚನ್ನೇಶಪುರದ ಮನೆಯಲ್ಲಿ ಪ್ರತ್ಯಕ್ಷವಾಗಿದ್ದಾರೆ. 

ಅದ್ಧೂರಿ ಸ್ವಾಗತ: ಕೆಎಸ್‌ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಮಾಡಾಳ್‌ ವಿರೂಪಾಕ್ಷಪ್ಪ ಅವರು ಆರು ದಿನಗಳ ನಂತರ ತಮ್ಮ ಹುಟ್ಟೂರು ಚನ್ನೇಶಪುರದ ನಿವಾಸಕ್ಕೆ ವಾಪಸ್‌ ಆಗಿದ್ದು, ಅಭಿಮಾನಿಗಳು ಅದ್ಧೂರಿ ಸ್ವಾಗತ ನೀಡಿದ್ದಾರೆ. ಅಲ್ಲದೇ ಕಾರಿನಲ್ಲಿ ಮೆರವಣಿಗೆ ಮಾಡಿದ್ದಾರೆ.

#WATCH | Davanagere, Karnataka: Channagiri MLA Madal Virupakshappa was welcomed by BJP workers as he was granted interim anticipatory bail by Karnataka HC.

He was absconding for 5 days after his son was arrested along with 4 others while taking a bribe of Rs 40 lakhs. pic.twitter.com/loL3MI8n71
— ANI (@ANI) March 7, 2023

ಮೆರವಣಿಗೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಡಾಳ್ ವಿರೂಪಾಕ್ಷಪ್ಪ, ನಾನು ಯಾವುದೇ ತಪ್ಪು ಮಾಡಿಲ್ಲ. ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಎಲ್ಲಾ ಹಣಕ್ಕೂ ನಮ್ಮ ಬಳಿ ಸೂಕ್ತ ದಾಖಲೆ ಇದೆ. ಆ ಹಣವನ್ನು ವಾಪಸ್ ಪಡೆಯುತ್ತೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು

ನನ್ನ ವಿರುದ್ಧ ಯಾರೋ ಷಡ್ಯಂತ್ರ ನಡೆಸಿದ್ದಾರೆ. ಒಂದು ಆಡಳಿತ ಪಕ್ಷದ ಶಾಸಕರ ಮೇಲೆ ದಾಳಿ ನಡೆದಿದ್ದು ಇತಿಹಾಸದಲ್ಲೇ ಮೊದಲು ಎಂದು ಮಾಡಾಳ್ ವಿರೂಪಾಕ್ಷಪ್ಪ ಅವರು ಹೇಳಿದ್ದಾರೆ.

LEAVE A REPLY

Please enter your comment!
Please enter your name here