Home Uncategorized ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಕುಸಿದ ಬ್ಯಾರಿಕೇಡ್‌ಗಳು

ವಿಜಯಪುರದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಹೆಲಿಕಾಪ್ಟರ್ ಇಳಿಯುತ್ತಿದ್ದಂತೆ ಕುಸಿದ ಬ್ಯಾರಿಕೇಡ್‌ಗಳು

29
0

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬ್ಯಾರಿಕೇಡ್‌ಗಳು ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ವರದಿಯಾಗಿದೆ. ವಿಜಯಪುರ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಬ್ಯಾರಿಕೇಡ್‌ಗಳು ಕುಸಿದು ಬಿದ್ದ ಘಟನೆ ವಿಜಯಪುರ ಜಿಲ್ಲೆಯಲ್ಲಿ ಶನಿವಾರ ವರದಿಯಾಗಿದೆ.

ಅಧಿಕಾರಿಗಳ ಪ್ರಕಾರ, ಈ ಘಟನೆಯು ಭದ್ರತಾ ಕಳವಳವನ್ನು ಹೆಚ್ಚಿಸಿತು ಮತ್ತು ಅಧಿಕಾರಿಗಳು ಅದನ್ನು ಪರಿಶೀಲಿಸುತ್ತಿದ್ದಾರೆ. ಸೈನಿಕ ಶಾಲೆಯ ಆವರಣದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲು ಕೇಂದ್ರ ಸಚಿವರು ವಿಜಯಪುರಕ್ಕೆ ತಲುಪಿದ್ದರು.

ಶಾಲೆಯ ಆವರಣದಲ್ಲಿ ಹೆಲಿಕಾಪ್ಟರ್ ಲ್ಯಾಂಡಿಂಗ್ ಪ್ರಕ್ರಿಯೆಯಲ್ಲಿದ್ದಾಗ, ಲ್ಯಾಂಡಿಂಗ್ ಸಮಯದಲ್ಲಿ ಉಂಟಾಗುವ ಗಾಳಿಯ ರಭಸಕ್ಕೆ ಸುತ್ತಲಿನ ರಕ್ಷಣೆಗಾಗಿ ನಿರ್ಮಿಸಲಾದ ಬ್ಯಾರಿಕೇಡ್‌ಗಳು ಕಳಚಿ ಬಿದ್ದವು.

ಸ್ಥಳದಲ್ಲಿದ್ದ ಪೊಲೀಸರು ದೌಡಾಯಿಸಿ ಅಪಾಯಕ್ಕೆ ಆಸ್ಪದ ನೀಡದೆ ಮತ್ತೆ ಅವುಗಳನ್ನು ನಿಲ್ಲಿಸಿದರು. ನಂತರ ಜೋಶಿ ಅವರು ಹೆಲಿಪ್ಯಾಡ್‌ನಿಂದ ಅತಿಥಿ ಗೃಹದ ಕಡೆಗೆ ತೆರಳಿದರು.

ಮಾರ್ಚ್ 6 ರಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೆರಳುತ್ತಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ಹೊರವಲಯದಲ್ಲಿರುವ ಹೆಲಿಪ್ಯಾಡ್ ಬಳಿ ಕಸದ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿದ್ದವು. ಪಟ್ಟಣದಲ್ಲಿ ಮುಖಂಡರ ಸಂಚಾರಕ್ಕೆ ಅನುಕೂಲವಾಗುವಂತೆ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಆದರೆ, ಅಧಿಕಾರಿಗಳು ನಿರ್ವಹಣೆ ಮತ್ತು ಪ್ರೋಟೋಕಾಲ್‌ಗಳ ಅನುಸರಣೆಯಿಲ್ಲದೆ ಕಾರಣ, ಚಾಪರ್ ಇಳಿಯುವ ಸಮಯದಲ್ಲಿ ಆ ಪ್ರದೇಶದಲ್ಲಿ ಪ್ಲಾಸ್ಟಿಕ್ ಚೀಲಗಳು ಹಾರಿ ಬಂದಿದವು.

LEAVE A REPLY

Please enter your comment!
Please enter your name here