ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ. ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ 60 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಯುವಕರನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತರನ್ನು ಸದ್ದಾ ಶೇಕ್ ಮತ್ತು ರವಿ ಎಂದು ಗುರುತಿಸಲಾಗಿದ್ದು, ಇವರು ರದ್ದಿ ಅಂಗಡಿಯಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ.
ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಸಂತ್ರಸ್ತೆಯ ಸ್ಥಿತಿ ಗಂಭೀರವಾಗಿದೆ. ಸಂತ್ರಸ್ತೆ ಜೋರಾಪುರ ಪೇಟೆಯ ದೇವಸ್ಥಾನದಲ್ಲಿ ಭಕ್ತರು ನೀಡುವ ಭಿಕ್ಷೆಯಿಂದ ಜೀವನ ಸಾಗಿಸುತ್ತಿದ್ದರು.
ಪೊಲೀಸರ ಪ್ರಕಾರ, ಮಾರ್ಚ್ 2 ರಂದು ಸಂತ್ರಸ್ತೆ ತನ್ನ ಮನೆಗೆ ಡ್ರಾಪ್ ಮಾಡಲು ಆರೋಪಿಗಳ ಸಹಾಯವನ್ನು ಕೋರಿದಾಗ, ಅವರು ತಕ್ಷಣವೇ ಒಪ್ಪಿಕೊಂಡಿದ್ದಾರೆ. ಆದರೆ, ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ.
ಆರೋಪಿಗಳು ವಯೋವೃದ್ಧ ಸಂತ್ರಸ್ತೆಯನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಸ್ಥಳದಲ್ಲೇ ಬಿಟ್ಟು ಹೋಗಿದ್ದಾರೆ.
ಪ್ರಜ್ಞೆ ಬಂದ ನಂತರ ಸಂತ್ರಸ್ತೆ ಜಮಖಂಡಿ ರಸ್ತೆಗೆ ಬರುವಲ್ಲಿ ಯಶಸ್ವಿಯಾಗಿದ್ದಾರೆ. ಮಹಿಳೆಯ ಅವಸ್ಥೆಯನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆರೋಪಿಗಳ ವಿವರ ಸಂಗ್ರಹಿಸಿದ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮುಂದಿನ ತನಿಖೆ ನಡೆಯುತ್ತಿದೆ.