Home Uncategorized ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು; ಬೆಂಗಳೂರಿನಲ್ಲಿ ಘಟನೆ!

ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವು; ಬೆಂಗಳೂರಿನಲ್ಲಿ ಘಟನೆ!

12
0
bengaluru

ಚರಂಡಿ ದುರಸ್ತಿ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರು: ಚರಂಡಿ ದುರಸ್ತಿ ಕಾಮಗಾರಿ ವೇಳೆ ದುರಂತ ಸಂಭವಿಸಿದ್ದು, ವಿದ್ಯುತ್ ತಗುಲಿ ಕಾರ್ಮಿಕರಿಬ್ಬರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್ ಮೆಂಟ್ ನಲ್ಲಿ ಈ ಘೋರ ಘಟನೆ ಸಂಭವಿಸಿದ್ದು, ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾವಿ: ಮಲಪ್ರಭಾ ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ನೀರು ಪಾಲು

ಮೂಲಗಳ ಪ್ರಕಾರ ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಪಟ್ಟವರಾಗಿದ್ದಾರೆ.  ಕೋಣನಕುಂಟೆಯ ಪ್ರೆಸ್ಟೀಜ್ ಗ್ರೂಪ್ ಅಪಾರ್ಟ್‌ಮೆಂಟ್‌ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು, ರಾತ್ರಿ ಪಾಳಿಯಲ್ಲಿ ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಗುಲಿ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. 

bengaluru

ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ಮೃತದೇಹಗಳನ್ನುಇರಿಸಲಾಗಿದ್ದು, ಕೋಣನಕುಂಟೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
 

bengaluru

LEAVE A REPLY

Please enter your comment!
Please enter your name here