Home Uncategorized ವಿಧಾನಸಭಾ ಚುನಾವಣೆ: ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಆಯೋಗ ಪರಿಶೀಲನೆ

ವಿಧಾನಸಭಾ ಚುನಾವಣೆ: ಚುನಾವಣೆ ಪೂರ್ವ ಸಿದ್ಧತೆ ಬಗ್ಗೆ ಆಯೋಗ ಪರಿಶೀಲನೆ

15
0
bengaluru

ಏಪ್ರಿಲ್/ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಫೆಬ್ರವರಿ 7 ರಿಂದ 9 ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಂಗಳೂರು: ಏಪ್ರಿಲ್/ಮೇ ತಿಂಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಲು ಭಾರತ ಚುನಾವಣಾ ಆಯೋಗದ ಅಧಿಕಾರಿಗಳು ಫೆಬ್ರವರಿ 7 ರಿಂದ 9 ರವರೆಗೆ ರಾಜ್ಯದ ವಿವಿಧ ಭಾಗಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಕಳೆದ ಬಾರಿ ಕಡಿಮೆ ಮತದಾನವಾಗಿರುವ ಮತಗಟ್ಟೆಗಳನ್ನು ಗುರುತಿಸಿ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣ ಹೆಚ್ಚಿಸಲು ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯ ಅಧಿಕಾರಿಗಳಿಗೆ ಸೂಚಿಸಿದರು.

ಉಪ ಚುನಾವಣಾ ಆಯುಕ್ತ ಅಜಯ್ ಭಾದೂ ಮತ್ತು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದ ತಂಡವು ಯಾದಗಿರಿ ಜಿಲ್ಲೆಗೆ ಭೇಟಿ ನೀಡಿತು. ಈ ವೇಳೆ ಅಧಿಕಾರಿಗಳು ವಿದ್ಯುನ್ಮಾನ ಮತಯಂತ್ರಗಳು (ಇವಿಎಂ) ಮತ್ತು ವೋಟರ್ ವೆರಿಫೈಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪಿಎಟಿ) ಪರಿಶೀಲಿಸಿದರು. ಬಳಿಕ ಕಲಬುರಗಿ ವಿಭಾಗದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇಸಿಐ ನಿರ್ದೇಶಕಿ ಶುಭ್ರ ಸಕ್ಸೇನಾ ಮತ್ತು ಕಾರ್ಯದರ್ಶಿ ಬಿ.ಸಿ.ಪಾತ್ರ ಚಾಮರಾಜನಗರಕ್ಕೆ ಭೇಟಿ ನೀಡಿದ್ದು, ಮತದಾರರ ವ್ಯವಸ್ಥಿತ ಶಿಕ್ಷಣ ಮತ್ತು ಚುನಾವಣಾ ಭಾಗವಹಿಸುವಿಕೆ ಅಡಿಯಲ್ಲಿ ಕೈಗೊಳ್ಳಬೇಕಾದ ಕಾರ್ಯಕ್ರಮಗಳ ಸಿದ್ಧತೆಗಳನ್ನು ಪರಿಶೀಲಿಸಿದರು. ನಂತರ ಎಸ್’ವಿಇಇಪಿ ನಿರ್ದೇಶಕ ಸಂತೋಷ್ ಅಜ್ಮೇರಾ ನೇತೃತ್ವದ ತಂಡವು ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿತು.

bengaluru

ಕಳೆದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಡಿಮೆ ಮತದಾನವಾದ ಮತಗಟ್ಟೆಗಳನ್ನು ಗುರುತಿಸುವುದು, ಕಡಿಮೆ ಮತದಾನಕ್ಕೆ ಕಾರಣಗಳನ್ನು ಗುರುತಿಸುವುದು ಮತ್ತು ಅದನ್ನು ಸರಿಪಡಿಸುವ ಕ್ರಮಗಳನ್ನು ಕೈಗೊಳ್ಳುವುದು, ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಳ್ಳುವುದು ಮತ್ತು ಮತದಾರರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸುವುದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಹಲವು ವಿಚಾರಗಳ ಕುರಿತು ಚುನಾವಣಾ ಆಯೋಗದ ಅಧಿಕಾರಿಗಳು ಚರ್ಚೆ ನಡೆಸಿದರು.

bengaluru

LEAVE A REPLY

Please enter your comment!
Please enter your name here