Home Uncategorized ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಂಚಿನ ಪ್ರತಿಮೆ ಅನಾವರಣ, ಸಿಎಂ ಬೊಮ್ಮಾಯಿ...

ವಿಧಾನಸೌಧ ಆವರಣದಲ್ಲಿ ರಾಜ್ಯದ ಮೊದಲ ಮುಖ್ಯಮಂತ್ರಿ ಕೆ ಸಿ ರೆಡ್ಡಿ ಕಂಚಿನ ಪ್ರತಿಮೆ ಅನಾವರಣ, ಸಿಎಂ ಬೊಮ್ಮಾಯಿ ಇಂದು ದೆಹಲಿಗೆ

6
0
bengaluru

ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ.ಸಿ.ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆಸಿ ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು. ಸ್ವಾತಂತ್ಯ್ರೋತ್ತರ ಕರ್ನಾಟಕದ ಅಂದರೆ ಅಂದಿನ ಮೈಸೂರು ರಾಜ್ಯದ ಮೊದಲ ಮುಖ್ಯಮಂತ್ರಿಗಳಾಗಿದ್ದವರು ಕೆ.ಸಿ.ರೆಡ್ಡಿ. ಕೆಂಗಲ್ ಹನುಮಂತಯ್ಯನವರು ವಿಧಾನಸೌಧ ನಿರ್ಮಾಣ ಮಾಡಿದವರು. ಅದೇ ರೀತಿ ಕರ್ನಾಟಕಕ್ಕೆ ಮೊದಲ ಮುಖ್ಯಮಂತ್ರಿಯಾದವರು ಕೆಸಿ ರೆಡ್ಡಿಯವರು. 1902-1976 ರವರೆಗೆ ಜೀವಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಮಾದರಿ ಆಡಳಿತ ನೀಡಿದವರು.

ಚೆಂಗಲರಾಯ ರೆಡ್ಡಿ ಎನ್ನುವ ಹೆಸರಿನಲ್ಲಿ ಮೈಸೂರು ರಾಜ್ಯದ ಮೊಟ್ಟ ಮೊದಲ ಮುಖ್ಯಮಂತ್ರಿಯಾಗಿ ಜನಪರ ಆಡಳಿತ ನೀಡಿದವರು. ಕೋಲಾರ ಜಿಲ್ಲೆ ಕೆ.ಜಿ.ಎಫ್ ತಾಲೂಕಿನ ಕ್ಯಾಸಂಬಳ್ಳಿ ಊರಿನ ಕೆಸಿ ರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿ ಪ್ರಖ್ಯಾತರಾದವರು. ಜವಾಹರಲಾಲ್ ನೆಹರೂ ಅವರು ಪ್ರಧಾನಿಯಾಗಿದ್ದಾಗ ಮಧ್ಯಪ್ರದೇಶದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದರು.

ವಿಧಾನಸೌಧ ಆವರಣದಲ್ಲಿ ಕೆ ಸಿ ರೆಡ್ಡಿ ಕಂಚಿನ ಪ್ರತಿಮೆ: ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಡಾ ಕೆ ಸುಧಾಕರ್, ಆನಂದ್ ಸಿಂಗ್ ಇದ್ದರು. ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಹಾಜರಿದ್ದರು.

bengaluru

ವಿಧಾನಸೌಧದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ ರೆಡ್ಡಿ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ @BSBommai ಅವರು ಇಂದು ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ @mla_sudhakar, @AnandSinghBS, ಶಾಸಕ ರಾಮಲಿಂಗಾ ರೆಡ್ಡಿ ಹಾಗೂ ಕೆ.ಸಿ.ರೆಡ್ಡಿ ಕುಟುಂಬಸ್ಥರು ಹಾಜರಿದ್ದರು. pic.twitter.com/4TeWHptaUd
— CM of Karnataka (@CMofKarnataka) February 25, 2023

ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪಕ್ಷದ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ. 

ಸಿಎಂ ಬೊಮ್ಮಾಯಿ ಇಂದು ದೆಹಲಿಗೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಧ್ಯಾಹ್ನ 12 ಗಂಟೆಗೆ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ತಮ್ಮ ಪಕ್ಷದ ಪ್ರಮುಖ ನಾಯಕರನ್ನು ಭೇಟಿಯಾಗುವ ಸಾಧ್ಯತೆ ಇದ್ದು, ಮುಂದಿನ ಚುನಾವಣೆಗೆ ಸಂಬಂಧಿಸಿದಂತೆ ಚರ್ಚೆ ನಡೆಸಿ ರಾತ್ರಿಯೇ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ.

bengaluru

LEAVE A REPLY

Please enter your comment!
Please enter your name here