Home Uncategorized ವೇತನ ಹೆಚ್ಚಳ ಆಗ್ರಹ: ಮಾರ್ಚ್1 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

ವೇತನ ಹೆಚ್ಚಳ ಆಗ್ರಹ: ಮಾರ್ಚ್1 ರಿಂದ ಸಾರಿಗೆ ನೌಕರರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ

14
0

ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರು ಮಾರ್ಚ್ 1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಸರ್ಕಾರ ಹಲವು ಬಾರಿ ಮೌಖಿಕ ಭರವಸೆಗಳನ್ನು ನೀಡಿ, ಪ್ರತಿಭಟನೆ ಕೈಬಿಡುವಂತೆ ಮಾಡಿತ್ತು. ಆದರೆ, ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ, ಹೀಗಾಗಿ ಮರಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದ್ದು, ಈ ಬಾರಿ ಯಾವುದೇ ಕಾರಣಕ್ಕೂ ವೇತನ ಹೆಚ್ಚಳ ಮಾಡದ, ನಮ್ಮ ಬೇಡಿಕೆಗಳು ಈಡೇರಿಸದ ಹೊರತು ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಸಾರಿಗೆ ನೌಕರರ ಸಂಘದ ಸದಸ್ಯರು ಹೇಳಿದ್ದಾರೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ಮತ್ತು ಕೆಕೆಎಸ್‌ಆರ್‌ಟಿಸಿ ನಾಲ್ಕು ಸಾರಿಗೆ ನಿಗಮಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ನೌಕರರು ಕಾರ್ಯನಿರ್ವಹಿಸುತ್ತಿದ್ದಾರೆ. 2016 ರಲ್ಲಿ ವೇತನ ಹೆಚ್ಚಳ ಮಾಡಲಾಗಿತ್ತು. ಇಲ್ಲಿಯವರೆಗೆ ಮರಳಿ ವೇತನ ಹೆಚ್ಚಿಸುವ ಕುರಿತು ಸರ್ಕಾರ ಕ್ರಮ ಕೈಗೊಂಡಿಲ್ಲ.

2021 ರಲ್ಲಿ ಪ್ರತಿಭಟನೆ ನಡೆಸಿದಾಗ ಸರ್ಕಾರ ಮೌಖಿಕವಾಗಿ ಭರವಸೆ ನೀಡಿತ್ತು. ಆದರೆ, ಇನ್ನೂ ಭರವಸೆ ಈಡೇರಿಸಿಲ್ಲ ಎಂದು ಕರ್ನಾಟಕ ರಸ್ತೆ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಚುನಾವಣೆಗಳು ಹತ್ತಿರದಲ್ಲಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತಿದ್ದು, ಪ್ರತಿಭಟನೆಯಲ್ಲಿ 2 ಸಾವಿರಕ್ಕೂ ಹೆಚ್ಚು ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪ್ರತಿಭಟನೆಯಿಂದ ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬುದು ನಮ್ಮ ಉದ್ದೇಶವಾಗಿದ್ದು, ಸಾಮಾನ್ಯ ಸಾರಿಗೆಗೆ ತೊಂದರೆಯಾಗದ ರೀತಿಯಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ಇದರ ನಡುವೆಯೂ ಸರ್ಕಾರ ನಮಗೆ ಯಾವುದೇ ಸಕಾರಾತ್ಮಕ ಉತ್ತರ ನೀಡಿದ್ದರೆ, ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಧರಣಿಯಾಗಿ ಪರಿವರ್ತಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

LEAVE A REPLY

Please enter your comment!
Please enter your name here