ಶಿವಾಜಿನಗರ, ಮಹದೇವಪುರ ವಲಯ ಹಾಗೂ ಚಿಕ್ಕಪೇಟೆಯಲ್ಲಿ ಮತದಾರರ ದತ್ತಾಂಶ ತಿದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ (ಆಡಳಿತ) ಎಸ್. ರಂಗಪ್ಪ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿದ್ದು, ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು: ಶಿವಾಜಿನಗರ, ಮಹದೇವಪುರ ವಲಯ ಹಾಗೂ ಚಿಕ್ಕಪೇಟೆಯಲ್ಲಿ ಮತದಾರರ ದತ್ತಾಂಶ ತಿದ್ದಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆಯುಕ್ತ (ಆಡಳಿತ) ಎಸ್. ರಂಗಪ್ಪ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರ ಅಮಾನತು ಆದೇಶವನ್ನು ಸರ್ಕಾರ ಹಿಂಪಡೆದಿದ್ದು, ಅವರನ್ನು ವರ್ಗಾವಣೆ ಮಾಡಲಾಗಿದೆ.
ರಾಜೀವ್ ಗಾಂಧಿ ಹೌಸಿಂಗ್ ಕಾರ್ಪೊರೇಷನ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಶ್ರೀನಿವಾಸ್ ಅವರನ್ನು ನೇಮಕ ಮಾಡಲಾಗಿದ್ದು, ಕರ್ನಾಟಕ ರಾಜ್ಯ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ರಂಗಪ್ಪ ಅವರನ್ನು ನಿಯೋಜಿಸಿದೆ.
ನ್ಯಾಯಾಲಯದ ಮುಂದೆ ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಅಧಿಕಾರಿಗಳ ಅಮಾನತುಗಳನ್ನು ರದ್ದುಗೊಳಿಸುವುದು ಆಡಳಿತಾತ್ಮಕ ನಿರ್ಧಾರವಾಗಿದೆ. ಆದರೆ, ಪೊಲೀಸ್ ತನಿಖೆ ಇನ್ನೂ ಬಾಕಿ ಇದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
‘ನಾವು ಎಫ್‌ಎಸ್‌ಎಲ್ ವರದಿಗಾಗಿ ಕಾಯುತ್ತಿದ್ದೇವೆ ಮತ್ತು ಚಾರ್ಜ್‌ಶೀಟ್ ಇನ್ನೂ ಸಲ್ಲಿಕೆಯಾಗಬೇಕಿದೆ. ಅದರ ನಂತರವಷ್ಟೇ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಇದರಲ್ಲಿ ಅಧಿಕಾರಿಗಳ ಪಾತ್ರವಿಲ್ಲ ಎಂಬುದು ದೃಢಪಟ್ಟರೆ, ಅವರಿಗೆ ಕ್ಲೀನ್ ಚಿಟ್ ನೀಡಲಾಗುವುದು. ಇದೇ ಕಾರಣಕ್ಕೆ ಅಧಿಕಾರಿಗಳನ್ನು ತಮ್ಮ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ನೋಟಿಸ್ ಜಾರಿ ಬಳಿಕ ಪೊಲೀಸರ ಮುಂದೆ ಹಾಜರಾದ ಅಮಾನತುಗೊಂಡಿರುವ ಇಬ್ಬರು ಬಿಬಿಎಂಪಿ ಅಧಿಕಾರಿಗಳು
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿದ ನಂತರ ಚುನಾವಣಾ ಆಯೋಗವು ಶ್ರೀನಿವಾಸ್ ಮತ್ತು ರಂಗಪ್ಪ ಇಬ್ಬರನ್ನೂ ವರ್ಗಾವಣೆ ಮಾಡಿದೆ. ಇದು ಹಿರಿಯ ಅಧಿಕಾರಿಗಳ ಅಡಿಯಲ್ಲಿ ಕೆಲಸ ಮಾಡುತ್ತಿದ್ದ ಕಂದಾಯ ಮತ್ತು ಸಹಾಯಕ ಕಂದಾಯ ಅಧಿಕಾರಿಗಳಂತಹ ಕೆಳಹಂತದ ಅಧಿಕಾರಿಗಳ ಬಂಧನಕ್ಕೂ ಕಾರಣವಾಯಿತು ಮತ್ತು ಎನ್‌ಜಿಒ ಚಿಲುಮೆಯೊಂದಿಗೆ ಶಾಮೀಲಾಗಿ ಬೂತ್ ಮಟ್ಟದ ಅಧಿಕಾರಿಗಳಿಗೆ ನಕಲಿ ಗುರುತಿನ ಚೀಟಿಯನ್ನು ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ.