Home ಬೆಂಗಳೂರು ನಗರ ಶರಾವತಿ ಮುಳುಗಡೆಸ ಸಂತ್ರಸ್ಥರಿಗೆ ಪುನರ್ವಸತಿ,ಭೂಮಿ ಹಕ್ಕು ನೀಡಲು ಜಂಟಿ ಸರ್ವೇ ನಡೆಸಲು ಸಿಎಂ ಸೂಚನೆ

ಶರಾವತಿ ಮುಳುಗಡೆಸ ಸಂತ್ರಸ್ಥರಿಗೆ ಪುನರ್ವಸತಿ,ಭೂಮಿ ಹಕ್ಕು ನೀಡಲು ಜಂಟಿ ಸರ್ವೇ ನಡೆಸಲು ಸಿಎಂ ಸೂಚನೆ

64
0

ಬೆಂಗಳೂರು:

ಶಿವಮೊಗ್ಗ ಜಿಲ್ಲೆಯ ಶರಾವತಿ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಸಂಬಂಧಿ ಸಿದ ಕುರಿತು ಚರ್ಚಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾ ದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಜಿಲ್ಲೆಯ ಶಿವಮೊಗ್ಗ,ಶಿಕಾರಿಪುರ,ಸೊರಬ,ಸಾಗರ,ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಮುಳುಗಡೆ ಸಂತ್ರಸ್ತರೆಂದು ಗುರುತಿಸಲ್ಪಟ್ಟು ಸುಮಾರು 9773 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಭೂಮಿಯ ಹಕ್ಕನ್ನು ದಾಖಲೆ ಮಾಡುವ ನಿಟ್ಟಿನಲ್ಲಿ ಕಂದಾಯ ಮತ್ತು ಅರಣ್ಯ ಇಲಾಖೆ ಯವರು ಜಂಟಿ ಸಮೀಕ್ಷೆ ನಡೆಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ಈ ಸಮೀಕ್ಷೆಯ ಆಧಾರದಲ್ಲಿ ಸಂತ್ರಸ್ತರಿಗೆ ವೈಯಕ್ತಿಕ ಪಹಣಿ ದಾಖಲಿಸಲು ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸ ಲು ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.ಪ್ರವಾಸೋದ್ಯಮ ಇಲಾಖೆಯವತಿ ಯಿಂದ ಪಿಪಿಪಿ ಮಾದರಿಯಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಅರಣ್ಯ ಇಲಾಖೆಯಿಂದ ನಿರಾಕ್ಷೇಪ ಣಾ ಪತ್ರ(ಎನ್ ಓ ಸಿ )ನೀಡುವಂತೆ ಕೋರಲಾಗಿದೆ.ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮೈಸೂರು ಕಾಗದ ಕಾರ್ಖಾನೆಯ ಅರಣ್ಯ ಪ್ರದೇಶದಲ್ಲಿ ಬೆಳೆದಿರುವ ಮರಗಳನ್ನು ಕಟಾವು ಮಾಡಿ,ಮಾರಾಟ ಮಾಡುವ ಮೂಲಕ ಸಿಬ್ಬಂದಿ ವೇತನ ಪಾವತಿಸಲು ಕ್ರಮ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ ರು.ಈಗಾಗಲೇ ಪುನರ್ವಸತಿ ತಡವಾಗಿದ್ದು‌ ನಿಗದಿತ ದಿನಾಂಕದ ಒಳಗೆ ಕೆಲಸ ಮಾಡಬೇಕು ಅಂತ ಮುಖ್ಯಮಂ ತ್ರಿಗಳು ಹಾಗು ಶಿವಮೊಗ್ಗದ ಸಂಸದರಾದ ಬಿ.ವೈ.ರಾಘವೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು

LEAVE A REPLY

Please enter your comment!
Please enter your name here