ಬೆಂಗಳೂರು:
ರಾಜ್ಯದಲ್ಲಿ ಶಾಲೆಗಳ ಪುನಾರಂಭ ಕುರಿತು ಪೋಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಎಲ್ಲ ಉಪನಿರ್ದೇಶಕರ ಜೊತೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ನ.4ರಿಂದ 6ರವರೆಗೆ ಸಭೆ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಪದವಿಪೂರ್ವ ಕಾಲೇಜುಗಳನ್ನು ಪುನರಾರಂಭಿಸುವ ಕುರಿತು ಕೂಡ ಚರ್ಚೆ ನಡೆಸಲಾಗುವುದು.
ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ , ಶಾಲೆಗಳ ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಲಿದ್ದಾರೆ. ಇದರೊಂದಿಗೆ ಶಾಲಾ ಕಟ್ಟಡ ಹಾಗೂ ಕೋಣೆಗಳ ದುರಸ್ತಿ, ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮತ್ತಿತರ ಸಿದ್ಧತೆಗಳ ಬಗ್ಗೆಯೂ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಮಾಹಿತಿ ಪಡೆಯಲಿದ್ದಾರೆ ಎಂದರು.
ಶಾಲೆಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದರು.