ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.
ಲೋಕಸಭಾ ಚುನಾವಣೆಯಲ್ಲಿ ಹಾವೇರಿಯಿಂದ ಸ್ಪರ್ಧಿಸಿ, ಸಂಸದರಾಗಿರುವ ಬೊಮ್ಮಾಯಿಯವರು ಶನಿವಾರ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಹಾಜರಿದ್ದರು.