Home Uncategorized ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ

3
0
bengaluru

ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ  ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಂಗಳೂರು: ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ  ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮರು ಟೆಂಡರ್ ಆಗಿರುವ ಹೊಸ ಪೇಟೆ- ಬಳ್ಳಾರಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಫೆಬ್ರವರಿಯಲ್ಲಿ ಆರಂಭಿಸಲ ತೀರ್ಮಾನಿಸಲಾಗಿದೆ. ರಾಯಚೂರು, ಕೊಪ್ಪಳ. ಯಾದಗಿರಿ, ಶಿವಮೊಗ್ಗದಲ್ಲಿ ಈ ವರ್ಷದಲ್ಲಿಯೇ ವರ್ತುಲ ರಸ್ತೆಗಳ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧರಿಸಲಾಗಿದೆ.

ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಫೆಬ್ರವರಿ ಅಂತ್ಯ ಅಥವಾ ಮಾರ್ಚ್ ಮೊದಲ ವಾರದಲ್ಲಿ ಲೋಕಾರ್ಪಣೆಯಾಗಲಿದ್ದು, ಬೆಂಗಳೂರು ಮೆಟ್ರೋ ಪ್ರಯಾಣಿಕರಿಗೆ ಕೊನೆ ಹಂತದ ಸಂಪರ್ಕ ಒದಗಿಸುವ ಬಗ್ಗೆ ತಜ್ಞರಿಂದ ಸಮಗ್ರ ಅಧ್ಯಯನ ನಡೆಸಲು ತೀರ್ಮಾನಿಸಲಾಗಿದೆ.

ಇದನ್ನೂ ನೋಡಿ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಆಗಸದಿಂದ ಕಂಡಿದ್ದು ಹೀಗೆ…!

bengaluru

ಬೆಂಗಳೂರು ನಗರ ಸಂಚಾರ ದಟ್ಟಣೆ ನಿಯಂತ್ರಿಸಲು ನಗರದಲ್ಲಿರುವ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಮೇಲ್ಸೇತುವೆ ನಿರ್ಮಿಸಲು ಒಪ್ಪಿಗೆ ನೀಡಲಾಗಿದೆ. 

ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿಗಳನ್ನು ಹೊರತುಪಡಿಸಿ ವಿವಿಧ ನಗರ ಹಾಗೂ ಪಟ್ಟಣಗಳಲ್ಲಿ ರೈಲ್ವೇ ಮೇಲ್ಸೇತುವೆ ಹಾಗೂ ಕೆಳ ಸೇತುವೆ ನಿರ್ಮಿಸಲು ರೂ. 1,000 ಕೋಟಿ ಅನುದಾನ ನೀಡಲು ಒಪ್ಪಿಗೆ ಸೂಚಿಸಲಾಗಿದ್ದು, ಶೀಘ್ರದಲ್ಲಿಯೇ ಈ ಬಗ್ಗೆ ಪ್ರಸ್ತಾವನೆ ಸಲ್ಲಿಕೆಗೆ ತೀರ್ಮಾನಿಸಲಾಗಿದೆ. 
 

ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ @nitin_gadkari ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ ಸಭೆಯ ಮುಖ್ಯಾಂಶಗಳು.@BSBommai pic.twitter.com/wjIdSmyV8Y
— CM of Karnataka (@CMofKarnataka) January 6, 2023

bengaluru

LEAVE A REPLY

Please enter your comment!
Please enter your name here