Home Uncategorized ಶಿವಮೊಗ್ಗದಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

ಶಿವಮೊಗ್ಗದಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರ ಹತ್ಯೆ

3
0
bengaluru

ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗ: ಶಿವಮೊಗ್ಗ ಹೊರವಲಯದ ಸೂಳೆಬೈಲಿನಲ್ಲಿ ಅಕ್ರಮವಾಗಿ ತೆರೆದಿದ್ದ ಕಸಾಯಿ ಖಾನೆಯಲ್ಲಿ 7 ಹಸುಗಳ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಖಚಿತ ಮಾಹಿತಿ ಮೇರೆಗೆ ಶುಕ್ರವಾರ ಬೆಳಗ್ಗೆ 5.30ಕ್ಕೆ ತುಂಗಾನಗರ ಠಾಣೆ ಪಿಐ ಮಂಜುನಾಥ್ ನೇತೃತ್ವದಲ್ಲಿ ಪೊಲೀಸರು ಮತ್ತು ಮಹಾನಗರ ಪಾಲಿಕೆ ಸಿಬ್ಬಂದಿ ದಾಳಿ ಮಾಡಿದ್ದು, ಅಷ್ಟರಲ್ಲಾಗಲೇ 7 ಹಸುಗಳ ಮಾರಣಹೋಮ ನಡೆದುಹೋಗಿದೆ.

ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸಲು ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಅನುಮತಿ

ಸೂಳೆಬೈಲಿನ ಅಜೀಜ್ ಎಂಬುವರ ಮನೆ ಹಿಂಭಾಗದ ಶೆಡ್​ನಲ್ಲಿ ಮಾಂಸಕ್ಕಾಗಿ ಗೋವುಗಳನ್ನ ಹತ್ಯೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

bengaluru

ಈ ನಡುವೆ ಅಕ್ರಮ ಕಸಾಯಿ ಖಾನೆಯಲ್ಲಿದ್ದ ಉಳಿದ 10 ಹಸುಗಳನ್ನ ಪೊಲೀಸರು ರಕ್ಷಣೆ ಮಾಡಿದ್ದು, ಗೋಶಾಲೆಗೆ ಸ್ಥಳಾಂತರ ಮಾಡಲಾಗಿದೆ.

ಅಧಿಕಾರಿಗಳ ದಾಳಿ ಬೆನ್ನಲ್ಲೇ ಆರೋಪಿಗಳು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

bengaluru

LEAVE A REPLY

Please enter your comment!
Please enter your name here