Home Uncategorized ಶೇ.50 ರಿಯಾಯಿತಿ: 50 ಕೋಟಿ ರೂ ದಾಟಿದ ಟ್ರಾಫಿಕ್ ದಂಡ ಪಾವತಿ

ಶೇ.50 ರಿಯಾಯಿತಿ: 50 ಕೋಟಿ ರೂ ದಾಟಿದ ಟ್ರಾಫಿಕ್ ದಂಡ ಪಾವತಿ

31
0

ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ. 50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ. ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಂಡ ಪಾವತಿಸುವವರಿಗೆ ಶೇ. 50ರಷ್ಟು ರಿಯಾಯಿತಿ ಯೋಜನೆಗೆ ಅಭೂತಪೂರ್ವ ಪ್ರತಿಕ್ರಿಯೆ ಲಭಿಸಿದ್ದು, ರಿಯಾಯಿತಿಯ ಆರನೇ ದಿನಕ್ಕೆ ದಂಡ ಸಂಗ್ರಹ 45 ಕೋಟಿ ರೂ ದಾಟಿದೆ ಎನ್ನಲಾಗಿದೆ.

ವಾಹನಗಳ ಸಂಚಾರ ನಿಯಮ ಉಲ್ಲಂಘನೆಯ ಸಂಬಂಧಿಸಿದಂತೆ ಇಲ್ಲಿಯವರೆಗೆ 45 ಕೋಟಿಗೂ ಹೆಚ್ಚು ದಂಡ ಸಂಗ್ರಹಗೊಂಡಿದೆ. ಕಳೆದ ಫೆ. 3ರಂದು ಈ ವಿನಾಯಿತಿ ಜಾರಿಗೆ ಬಂದಿದ್ದು, ಮೊದಲ ದಿನವೇ5,61,45,000 ರೂಪಾಯಿಗೂ ಅಧಿಕ ದಂಡದ ಮೊತ್ತ ಸಂಗ್ರಹವಾಗಿತ್ತು. ಎರಡನೇ ದಿನ ಬರೋಬ್ಬರಿ 6,80,72,500 ರೂ. ದಂಡ ಸಂಗ್ರಹವಾಗಿತ್ತು. ಮೂರನೇ ದಿನ 7,49,94,870 ರೂಗಳು ಸಂಗ್ರಹವಾದರೆ, 4ನೇ ದಿನ 9,57,12,420, 5ನೇ ದಿನವಾದ ನಿನ್ನೆ 8,13,12,200 ಸಂಗ್ರಹಗೊಂಡು ಒಟ್ಟು41,20,89,231 ರೂ ಸಂಗ್ರಹವಾಗಿ 14,71,231 ಪ್ರಕರಣಗಳು ಇತ್ಯರ್ಥಗೊಂಡಿದೆ.

ಇದನ್ನೂ ಓದಿ: ಶೇ.50 ರಿಯಾಯಿತಿ: ಮೂರನೇ ದಿನವೂ ಭರ್ಜರಿ ಕಲೆಕ್ಷನ್; ಒಟ್ಟು 22.3 ಕೋಟಿ ರೂ. ದಂಡ ವಸೂಲಿ!

ಇಂದು ಬೆಳಿಗ್ಗೆಯಿಂದ ಮತ್ತೆ ದಂಡ ಪಾವತಿ ಬಿರುಸಿನಿಂದ ನಡೆಯುತ್ತಿದ್ದು ಅದು 45 ಕೋಟಿ ದಾಟಿದೆ. ಸಂಚಾರ ನಿಯಮ ಉಲ್ಲಂಘನೆಯ ರಿಯಾಯಿತಿ ದಂಡ ಪಾವತಿಸುವವರ ಸಂಖ್ಯೆಯಲ್ಲಿ ಇಂದು ಹೆಚ್ಚಳ ಕಂಡುಬಂದಿದ್ದು ಸಂಜೆ ವೇಳೆಗೆ 45 ಕೋಟಿ ಗೂ ಹೆಚ್ಚು ದಂಡ ಸಂಗ್ರಹಗೊಂಡಿದೆ. ನಗರದ ಸಂಚಾರ ಪೊಲೀಸ್ ಠಾಣೆಗಳು ಮಾತ್ರವಲ್ಲದೆ, ಇನ್ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ನಿರ್ವಹಣಾ ಕೇಂದ್ರ(ಟಿಎಂಸಿ)ದಲ್ಲಿ ಕೌಂಟರ್ ತೆರೆದು ಬಾಕಿ ದಂಡದ ಮೊತ್ತ ಪಾವತಿಗೆ ಅವಕಾಶ ಕಲ್ಪಿಸಲಾಗಿರುವುದನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳ ತೊಡಗಿರುವುದರಿಂದ ದಂಡ ಪಾವತಿಗೆ ಭಾರಿ ಪ್ರಮಾಣದ ಜನಸಂದಣಿ ಉಂಟಾಗಿದೆ.

ಇದನ್ನೂ ಓದಿ:  ಶೇ.50 ರಷ್ಟು ರಿಯಾಯಿತಿಗೆ ಭರ್ಜರಿ ಪ್ರತಿಕ್ರಿಯೆ: ಎರಡೇ ದಿನದಲ್ಲಿ 13.81 ಕೋಟಿ ದಂಡ ವಸೂಲಿ!

ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ನ್ಯಾ.ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ವಿನಾಯಿತಿ ನೀಡುವಂತೆ ಚರ್ಚೆ ನಡೆಸಿದ್ದರು. ಇದಕ್ಕೆ ರಾಜ್ಯ ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ಗ್ರೀನ್ ಸಿಗ್ನಲ್ ತೋರಿದ್ದರು. ಇದರ ಮೇರೆಗೆ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯಾದ್ಯಂತ ಸಂಚಾರ ಪೊಲೀಸರು ದಾಖಲಿಸಿರುವ ಸಂಚಾರ ಉಲ್ಲಂಘನೆ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50 ವಿನಾಯಿತಿ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು.

ಇದನ್ನೂ ಓದಿ: ಸವಾರರಿಗೆ ಸಿಹಿ ಸುದ್ದಿ: ಟ್ರಾಫಿಕ್ ಫೈನ್ ಕಟ್ಟುವವರಿಗೆ ಶೇ. 50ರಷ್ಟು ರಿಯಾಯಿತಿ; ಕಟ್ಟಲು ಅಂತಿಮ ಗಡವು ಫೆಬ್ರವರಿ 11!

ಈ ಬಗ್ಗೆ ಕಾನೂನು ಇಲಾಖೆ ಅಧಿಕಾರಿಗಳ ಒಪ್ಪಿಗೆ ಪಡೆದ ಸಾರಿಗೆ ಇಲಾಖೆ, ಶೇ.50 ವಿನಾಯಿತಿ ನೀಡಿದೆ. ಹಲವು ದಿನಗಳಿಂದ ಬಾಕಿ ಉಳಿಸಿಕೊಂಡಿರುವ ಸಂಚಾರ ದಂಡವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ಸಿಗಲಿದೆ.
 

LEAVE A REPLY

Please enter your comment!
Please enter your name here