Home Uncategorized ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದರೊಬ್ಬರು ಸಾವು

ಶ್ರೀ ಕೃಷ್ಣ ಸಂಧಾನ ನಾಟಕ ಪ್ರದರ್ಶನದ ವೇಳೆ ಹೃದಯಾಘಾತ; ಕುಸಿದು ಬಿದ್ದು ಕಲಾವಿದರೊಬ್ಬರು ಸಾವು

11
0
bengaluru

ನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ. ಮಂಡ್ಯ: ನಾಟಕ ಪ್ರದರ್ಶನ ನೀಡುತ್ತಿದ್ದಾಗಲೇ ಹೃದಯಾಘಾತದಿಂದ ಕುಸಿದು ಬಿದ್ದು ಕಲಾವಿದರೊಬ್ಬರು ಸಾವಿಗೀಡಾಗಿರುವ ಮನಕಲಕುವ ಘಟನೆ ಮಳವಳ್ಳಿ ತಾಲ್ಲೂಕಿನ ಬಂಡೂರು ಗ್ರಾಮದಲ್ಲಿ ಶನಿವಾರ ನಡೆದಿದೆ.

ದುಗ್ಗನಹಳ್ಳಿ ಗ್ರಾಮದ ಡಿ.ಎನ್. ನಂಜಯ್ಯ(41) ಎಂಬುವವರು ನಾಟಕ ಪ್ರದರ್ಶನದ ವೇಳೆಯೇ ಮೃತಪಟ್ಟಿದ್ದಾರೆ. ಇವರು ಸಾಮಾಜಿಕ ಹಾಗೂ ಪೌರಾಣಿಕ ನಾಟಕಗಳಲ್ಲಿ ಅಭಿನಯಿಸುತ್ತಿದ್ದರು.

ಗ್ರಾಮದ ಬಸವನಗುಡಿಯಲ್ಲಿ ಶನಿವಾರ ‘ಶ್ರೀ ಕೃಷ್ಣ ಸಂಧಾನ’ ನಾಟಕದಲ್ಲಿ ನಂಜಯ್ಯ ಸೇರಿದಂತೆ ಸುಮಾರು 20 ಕಲಾವಿದರು ನಾಟಕ ಪ್ರದರ್ಶನಕ್ಕೆ ಮುಂದಾಗಿದ್ದರು. ಈ ವೇಳೆ ವೇದಿಕೆಗೆ ಬಂದ ನಂಜಯ್ಯ ಅವರು, ಅಭಿನಯಿಸುತ್ತಿದ್ದಾಗಲೇ ಕುಸಿದು ಬಿದ್ದಿದ್ದಾರೆ.

ಈ ವೇಳೆ ಕೂಡಲೇ ಕಲಾವಿದರು ಹಾಗೂ ಗ್ರಾಮಸ್ಥರು ಅವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದರೂ, ಅಷ್ಟೊತ್ತಿಗಾಗಲೇ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ

bengaluru
bengaluru

LEAVE A REPLY

Please enter your comment!
Please enter your name here