ಬೆಂಗಳೂರು:
ಕೆ.ಜೆ. ಹಳ್ಳಿ, ಡಿ.ಜೆ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿ ದೋಷಾರೋಪಪಟ್ಟಿಯಲ್ಲಿ ಹೆಸರಿರುವ ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಸಿಸಿಬಿ ಪೊಲೀಸರು ವಿಶೇಷ ತಂಡ ರಚಿಸಿದ್ದಾರೆ.
ಚಿಕಿತ್ಸೆ ಪಡೆಯುತ್ತಿದ್ದ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಪರಾರಿಯಾಗಿರುವ ಸಂಪತ್ ರಾಜ್ ಗಾಗಿ ತೀವ್ರ ನಡೆಸಲಾಗಿದ್ದು ಅವರ ಬಂಧನಕ್ಕೆ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಂಪತ್ ರಾಜ್ ಜೊತೆ ಅವರ ಕುಟುಂಬದ ಸದಸ್ಯರ ಮೊಬೈಲ್ ಸಹ ಸ್ವಿಚ್ ಆಫ್ ಆಗಿದ್ದು ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರಿಗೆ ಸಂಪತ್ ರಾಜ್ ಎಲ್ಲಿದ್ದಾರೆ ಎನ್ನುವ ಸುಳಿವು ಸಿಕ್ಕಿದೆ. ಯಾವುದೇ ಕ್ಷಣದಲ್ಲಿ ಸಂಪತ್ ರಾಜ್ ಬಂಧನವಾಗುವ ಸಾಧ್ಯತೆಯಿದೆ ಎನ್ನಲಾಗಿದೆ.