Home Uncategorized ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅನರ್ಹತೆಗೆ ತಡೆ ನೀಡಲು ಹೈಕೋರ್ಟ್ ನಕಾರ

6
0
Advertisement
bengaluru

ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಬೆಂಗಳೂರು: ಹಾಸನ ಸಂಸದ ಸ್ಥಾನದಿಂದ ತಮ್ಮನ್ನು ಅನರ್ಹಗೊಳಿಸಿದ ಆದೇಶಕ್ಕೆ ತಡೆ ಕೋರಿ ಜೆಡಿಎಸ್ ಯುವ ನಾಯಕ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ.

ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು ತೀರ್ಪನ್ನು ಕಾಯ್ದಿರಿಸಿದ್ದರು. ಇಂದು ತೀರ್ಪು ಪ್ರಕಟಿಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರು, ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದಾರೆ.

ಇದನ್ನು ಓದಿ: ಸಂಸದ ಪ್ರಜ್ವಲ್ ರೇವಣ್ಣ ಅನರ್ಹತೆಗೆ ತಡೆ ಕೋರಿ ಅರ್ಜಿ: ತೀರ್ಪನ್ನು ಕಾಯ್ದಿರಿಸಿದ ಹೈಕೋರ್ಟ್​

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವವರೆಗೆ  ಅನರ್ಹತೆ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

bengaluru bengaluru

ಚುನಾವಣಾ ಅಕ್ರಮದ ಆಧಾರದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅಸಿಂಧುಗೊಳಿಸಿ ಸೆಪ್ಟೆಂಬರ್ 1 ರಂದು ಹೈಕೋರ್ಟ್ ತೀರ್ಪು ನೀಡಿದೆ. 


bengaluru

LEAVE A REPLY

Please enter your comment!
Please enter your name here