ಸಕಾಲ ಕಾರ್ಯಕ್ರಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಕಾಲ ಮಿಷನ್ ಉಸ್ತುವಾರಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು. ಬೆಂಗಳೂರು: ಸಕಾಲ ಕಾರ್ಯಕ್ರಮದಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಸಕಾಲ ಮಿಷನ್ ಉಸ್ತುವಾರಿ ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.
ನಾಗರಿಕರಿಗೆ ಸಕಾಲದಲ್ಲಿ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಸಕಾಲ ಮಿಷನ್ ಆರಂಭಿಸಲಾಗಿದ್ದು, ಅದರ ಅಡಿಯಲ್ಲಿ ಅರ್ಜಿಗಳನ್ನು ಬಾಕಿ ಇಡುವುದು ಸರಿಯಲ್ಲ ಎಂದು ಸಚಿವರು ಹೇಳಿದರು.
ಬಾಕಿ ಇರುವ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಕಾಲ ಮಿಷನ್ ಅಡಿಯಲ್ಲಿ 99 ಇಲಾಖೆಗಳ 1,115 ಸೇವೆಗಳು ಲಭ್ಯವಿವೆ. ಇನ್ನೂ ಹಲವಾರು ಜನರಿಗೆ ಸಕಾಲ ಯೋಜನೆ ಬಗ್ಗೆ ತಿಳಿದಿಲ್ಲ. ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲು ಅಧಿಕಾರಿಗಳು ಶ್ರಮಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.