ಬೆಂಗಳೂರು:
ಕನ್ನಡ ಮತ್ತು ಸಂಸ್ಕೃತಿ,ಪ್ರವಾಸೋದ್ಯಮ ಹಾಗೂ ಯುವಜನ ಸೇವಾ ಇಲಾಖೆ ಸಚಿವ ಸ್ಥಾನಕ್ಕೆ ಸಿ.ಟಿ.ರವಿ ರಾಜೀನಾಮೆ ಸಲ್ಲಿಸಿದ್ದಾರೆ.
ಸಚಿವ ಸಿ.ಟಿ.ರವಿ ರಾಜೀನಾಮೆಯನ್ನು ರಾಜ್ಯಪಾಲ ವಜೂಬಾಯಿ ವಾಲಾ ಅಂಗೀಕರಿಸಿದ್ದಾರೆ.ಸಿ.ಟಿರವಿ ಅವರ ನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ ಭಾರತ ರಾಜ್ಯಗಳ ಉಸ್ತುವಾರಿಯಾಗಿ ಬಿಜೆಪಿ ಹೈ ಕಮಾಂಡ್ ನೇಮಕಗೊಳಿಸಿತ್ತು.ಅದರ ಬೆನ್ನಲ್ಲೆ ಸಿ.ಟಿ.ರವಿ ರಾಜೀನಾಮೆ ಇಂಗಿತ ವ್ಯಕ್ತಪಡಿಸಿದ್ದರು.ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆಯನ್ನು ಅಂಗೀಕರಿಸಿ ರಾಜ್ಯಪಾಲರಿಗೆ ರವಾನಿಸಿದ್ದರು.ರಾಜ್ಯಪಾಲರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ಸಿ.ಟಿ.ರವಿ ಅವರ ಬಳಿ ಇದ್ದ ಮೂರು ಖಾತೆಗಳು ಮುಖ್ಯಮಂತ್ರಿ ಅವರಿಗೆ ವಹಿಸಲಾಗಿದ್ದು,ಉಪ ಚುನಾವಣೆ ಫಲಿತಾಂಶದ ಬಳಿಕ ಸಚಿ ವ ಸಂಪುಟ ವಿಸ್ತರಣೆ ಮಾಡಿ ಖಾತೆ ಹಂಚಿಕೆ ಮಾಡುವ ಸಾಧ್ಯೆತೆ ಇದೆ.
ಸಿ.ಟಿ.ರವಿ ರಾಜೀನಾಮೆ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡುವುದು ಬಹುತೇಕ ಖಚಿತವೆನ್ನಲಾಗಿದೆ.ಫಲಿ ತಾಂಶ ಪ್ರಕಟವಾದ ಬಳಿಕ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಿ ಪಕ್ಷದ ವರಿಷ್ಠರಿಂದ ಅನುಮತಿ ಪಡೆದು ಸಂಪುಟ ವಿಸ್ತರಣೆಅಥವಾ ಪುನರಾಚರನೆ ಮಾಡಲಿದ್ದಾರೆ ಎನ್ನಲಾಗಿದೆ.