Home Uncategorized ಸದ್ದಿಲ್ಲದೆ ಮತ್ತೆ ತಲೆ ಎತ್ತುತ್ತಿರುವ ಮಹಾಮಾರಿ ಕೊರೋನಾ: ರಾಜ್ಯದಲ್ಲಿ ಶುರುವಾಯ್ತು ಕೆಮ್ಮು ನೆಗಡಿ ಉಪಟಳ, ಆರೋಗ್ಯ...

ಸದ್ದಿಲ್ಲದೆ ಮತ್ತೆ ತಲೆ ಎತ್ತುತ್ತಿರುವ ಮಹಾಮಾರಿ ಕೊರೋನಾ: ರಾಜ್ಯದಲ್ಲಿ ಶುರುವಾಯ್ತು ಕೆಮ್ಮು ನೆಗಡಿ ಉಪಟಳ, ಆರೋಗ್ಯ ಸಚಿವರು ಹೇಳಿದ್ದೇನು?

20
0
Advertisement
bengaluru

ರಾಜ್ಯದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಎಲ್ಲೆಡೆ ನೆಗಡಿ, ಕೆಮ್ಮು, ಜ್ವರದ ಉಪಟಳ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.  

ಬೆಂಗಳೂರು: ರಾಜ್ಯದಲ್ಲಿ ಸದ್ದಿಲ್ಲದೆ ಮಹಾಮಾರಿ ಕೊರೋನಾ ತಲೆ ಎತ್ತುತ್ತಿದ್ದು, ಎಲ್ಲೆಡೆ ನೆಗಡಿ, ಕೆಮ್ಮು, ಜ್ವರದ ಉಪಟಳ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ತಜ್ಞರು ಸಲಹೆ ನೀಡುತ್ತಿದ್ದು, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಸೋಮವಾರ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಮಾರ್ಚ್ 8ರಂದು ಆಚರಿಸುವ ‘ಅಂತಾರಾಷ್ಟ್ರೀಯ ಮಹಿಳಾ ದಿನ’ದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಧಾನಸೌಧದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ‌ ನಿರ್ದೇಶನಾಲಯ ಆಯೋಜಿಸಿದ್ದ ‘ಸೈಕ್ಲೋಥಾನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಡಾಕೆ. ಸುಧಾಕರ್ ಅವರು ಪಾಲ್ಗೊಂಡಿದ್ದರು.

ಮಾರ್ಚ್ 8ರಂದು ಆಚರಿಸುವ ‘ಅಂತಾರಾಷ್ಟ್ರೀಯ ಮಹಿಳಾ ದಿನ’ದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ವಿಧಾನಸೌಧದ ಆವರಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ‌ ನಿರ್ದೇಶನಾಲಯ ಆಯೋಜಿಸಿದ್ದ ‘ಸೈಕ್ಲೋಥಾನ್’ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು‌.

bengaluru bengaluru

ಮಹಿಳೆಯರು, ಮಕ್ಕಳು‌ ಹಾಗೂ ಯುವಕರು ಸೈಕ್ಲೊಥಾನ್‌ನಲ್ಲಿ ಉತ್ಸಾಹದಿಂದ ಪಾಲ್ಗೊಂಡರು. pic.twitter.com/7xDmqJ04KL
— Dr Sudhakar K (@mla_sudhakar) March 5, 2023

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ದೇಶದಲ್ಲಿ ಹೊಸ ವೈರಾಣು ಎಚ್3ಎನ್2 ಪ್ರಬೇಧ ಪತ್ತೆಯಾಗಿದೆ. ಆದರೆ, ರಾಜ್ಯದಲ್ಲಿ ಇನ್ನೂ ಪತ್ತೆಯಾಗಿಲ್ಲ. ಈಗಾಗಲೇ ಅನುಸರಿಸಬೇಕಾದ ಕ್ರಮಗಳ ಕುರಿತು ಕೇಂದ್ರ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು, ನಾಳೆ ನಡೆಯುವ ಸಭೆಯಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು  ಎಂದು ಹೇಳಿದ್ದಾರೆ.

ಪ್ರಾಥಮಿಕ ವರದಿಗಳ ಪ್ರಕಾರ ಈ ವೈರಾಣುವಿನಿಂದ ದೀರ್ಘಾವಧಿಯ ಕೆಮ್ಮು ಇರಲಿದೆ. ಆದರೆ, ರಾಜ್ಯದಲ್ಲಿ ಎಚ್3ಎನ್2 ಪ್ರಭೇಧ ಪತ್ತೆಯಾಗಿಲ್ಲ, ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳಲ್ಲಿ ದಿನದಿಂದ ದಿನ ಏರಿಕೆ ಕಂಡುಬರುತ್ತಿದೆ. ನಿನ್ನೆ ಕೂಡ ರಾಜ್ಯದಲ್ಲಿ 95 ಹಾಗೂ ಬೆಂಗಳೂರಿನಲ್ಲಿ 79 ಹೊಸ ಪ್ರಕರಣಗಳು ಪತ್ತೆಯಾಗಿವೆ.

100 ದಿನಗಳ ನಂತರ ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಕೊರೋನಾ ಪ್ರಕರಣದಲ್ಲಿ ಹೆಚ್ಚಳಗಳು ಕಂಡು ಬಂದಿದೆ. ಇದರೊಂದಿಗೆ ರಾಜ್ಯದಲ್ಲಿ ಈವರೆಗೆ ಒಟ್ಟು 391 ಸಕ್ರಿಯ ಪ್ರಕರಣಗಳು ಇದ್ದು, ವಾರದಲ್ಲಿ ಕೋವಿಡ್ ಖಚತ ಪ್ರಕರಣ ಶೇಕಡವಾರು ಪ್ರಮಾಣ 2.44ಕ್ಕೆ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯದ ಬಗ್ಗೆ ಮುನ್ನೆಚ್ಚರಿಕೆ ವಹಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚಳವಾಗುತ್ತಿದ್ದರಿಂದ ರಾಜ್ಯದಲ್ಲಿ ಮತ್ತೆ ಮಹಾಮಾರಿ ಶುರುವಾಗುತ್ತಾ ಎಂಬ ಆತಂಕ ಶುರುವಾಗಿದೆ.


bengaluru

LEAVE A REPLY

Please enter your comment!
Please enter your name here