Home Uncategorized ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ

ಸಮಾಜವಾದಿ ಹೋರಾಟಗಾರ ಪ.ಮಲ್ಲೇಶ್ ಹೃದಯಾಘಾತದಿಂದ ನಿಧನ

26
0

ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೈಸೂರು: ಸಮಾಜವಾದಿ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕರಾಗಿದ್ದ ಮೈಸೂರಿನ ಪ.ಮಲ್ಲೇಶ್(85) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ ಮೈಸೂರಿನ ತಮ್ಮ ನಿವಾಸದಲ್ಲಿ ಎದೆ ನೋವಿನಿಂದ ಕುಸಿದು ಬಿದ್ದ ಮಲ್ಲೇಶ್ ಅವರನ್ನು ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದನ್ನು ಓದಿ: ಕನ್ನಡದ ಯುವ ನಟ ಧನುಷ್ ನಿಧನ, ಹುಟ್ಟೂರಿನಲ್ಲಿ ಅಂತ್ಯಸಂಸ್ಕಾರ

85 ವರ್ಷದ ಪ.ಮಲ್ಲೇಶ್ ಅವರು ಮೂವರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ. ಎರಡು ವರ್ಷಗಳ ಹಿಂದೆ ಅವರ ಪತ್ನಿ ಸರ್ವಮಂಗಳ ಅವರು ಮೃತಪಟ್ಟಿದ್ದರು.

1989ರ ಲೋಕಸಭೆ ಚುನಾವಣೆಯಲ್ಲಿ ಜನತಾ ದಳದಿಂದ ಸ್ಪರ್ಧಿಸಿದ್ದ ಪ.ಮಲ್ಲೇಶ್ ಅವರು 1,31,905 ಮತಗಳನ್ನು ಪಡೆಯುವ ಮೂಲಕ ಮೂರನೇ ಸ್ಥಾನ ಪಡೆದಿದ್ದರು. ಶ್ರೀಕಂಠದತ್ತ ನರಸಿಂಹ ರಾಜ ಒಡೆಯರ್ ವಿರುದ್ಧ ಸೋಲು ಅನುಭವಿಸಿದ್ದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಪ್ತರಾಗಿದ್ದ ಪ.ಮಲ್ಲೇಶ್ ಪ್ರಗತಿಪರ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಕಳೆದ ವರ್ಷ ಬ್ರಾಹ್ಮಣರ ಮತ್ತು ಬ್ರಾಹ್ಮಣ್ಯದ ಬಗ್ಗೆ ಮಾತನಾಡಿ, ವಿವಾದಕ್ಕೆ ಸಿಲುಕಿಕೊಂಡಿದ್ದರು.

LEAVE A REPLY

Please enter your comment!
Please enter your name here