Home Uncategorized ಸರ್ಕಾರದ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪವಿಲ್ಲ: ಸಚಿವ ಕೆ.ವೆಂಕಟೇಶ್

ಸರ್ಕಾರದ ಮುಂದೆ ಗೋಹತ್ಯೆ ನಿಷೇಧ ಕಾಯ್ದೆ ರದ್ದು ಪ್ರಸ್ತಾಪವಿಲ್ಲ: ಸಚಿವ ಕೆ.ವೆಂಕಟೇಶ್

20
0

ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ  ಪರಿಷತ್ತಿನಲ್ಲಿ  ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು. ಬೆಂಗಳೂರು: ಕರ್ನಾಟಕ ಗೋಹತ್ಯೆ ತಡೆ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ 2020 ಅನ್ನು ರದ್ದುಗೊಳಿಸುವುದಿಲ್ಲ ಎಂದು ರಾಜ್ಯ ಸರ್ಕಾರದಿಂದ ಸ್ಪಷ್ಟ ಹೇಳಿಕೆ ನೀಡುವಂತೆ ಒತ್ತಾಯಿಸಿ ಪ್ರತಿಪಕ್ಷ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ ನಂತರ  ಪರಿಷತ್ತಿನಲ್ಲಿ  ಗದ್ದಲದ ವಾತಾವರಣ ಸೃಷ್ಟಿಯಾಗಿತ್ತು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ. ವೆಂಕಟೇಶ್, ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧಿನಿಯಮ-2020ನ್ನು ರದ್ದುಪಡಿಸುವ ಪ್ರಸ್ತಾವ ಸರಕಾರದ ಮುಂದಿಲ್ಲ.  ಸಾಧಕ- ಬಾಧಕಗಳನ್ನು ಚರ್ಚಿಸುತ್ತಿದ್ದೇವೆ. ಹಾಗಾಗಿ ಮುಂದೆ ಏನಾಗುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ಉತ್ತರಿಸಿದರು. ಆದರೂ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸಿದರು.

ಇದನ್ನೂ ಓದಿ: ಎಲ್ಲಾ ಸರ್ಕಾರದ ಮೇಲಿರುವ ಆರೋಪಗಳ ಕುರಿತು ತನಿಖೆಗೆ ನಡೆಸಿ: ಸಿಎಂಗೆ ತೇಜಸ್ವಿನಿ ಗೌಡ ಆಗ್ರಹ

ವೆಂಕಟೇಶ್ ಅವರ ಹೇಳಿಕೆಗೆ ಪೂರಕವಾಗಿ ಸಚಿವ ಕೃಷ್ಣಬೈರೇಗೌಡ, ಆರ್. ಬಿ. ತಿಮ್ಮಾಪುರ ಮತ್ತಿತರ ಆಡಳಿತ ಪಕ್ಷದ ಸದಸ್ಯರು, ಕೇಳಿದ ಪ್ರಶ್ನೆಗೆ ಉತ್ತರ ನೀಡಲಾಗಿದೆ. ಆದರೂ ಬಿಜೆಪಿ ಸದಸ್ಯರು ಕಾಲಹರಣ ಮಾಡಲು ಅನಗತ್ಯವಾಗಿ ಸದನದ ಬಾವಿಗಿಳಿದು ಧರಣಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಭಾರತ ಗೋ ಮಾಂಸ ರಫ್ತಿನಲ್ಲಿ ವಿಶ್ವದಲ್ಲೇ 2ನೆ ಸ್ಥಾನದಲ್ಲಿದೆ. ಪ್ರತಿವರ್ಷ 26 ಸಾವಿರ ಟನ್‍ಗೂ ಅಧಿಕ ಗೋಮಾಂಸ ರಫ್ತಾಗುತ್ತಿದೆ. ಮೊದಲು ಇದನ್ನು ನಿಲ್ಲಿಸಿ ಎಂದು ಬಿಜೆಪಿ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು.

ಇದನ್ನೂ ಓದಿ: ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ: ಸ್ಪೀಕರ್ ಯುಟಿ ಖಾದರ್

ಆಡಳಿತ ಮತ್ತು ಪ್ರತಿಪಕ್ಷಗಳ ಸದಸ್ಯರ ನಡುವೆ ವಾಗ್ವಾದ ನಡೆಯುವ ಸಂದರ್ಭದಲ್ಲಿ ಸಭಾಪತಿ ಬಸವರಾಜಹೊರಟ್ಟಿ ಮಧ್ಯ ಪ್ರವೇಶಿಸಿ, ಸದಸ್ಯರು ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ಕೊಟ್ಟಿದ್ದಾರೆ. ಹೀಗಿದ್ದರೂ ಅದೇ ವಿಷಯವನ್ನು ಯಾಕೆ ಪ್ರಸ್ತಾಪ ಮಾಡುತ್ತೀದ್ದೀರಿ ಎಂದು ಬಿಜೆಪಿ ಸದಸ್ಯರಿಗೆ ಹೇಳಿದರು.

LEAVE A REPLY

Please enter your comment!
Please enter your name here