Home Uncategorized ಸರ್ಕಾರಿ ವಸತಿ ಶಾಲೆ ಅವ್ಯವಹಾರ: ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ

ಸರ್ಕಾರಿ ವಸತಿ ಶಾಲೆ ಅವ್ಯವಹಾರ: ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲರು ಸೇರಿದಂತೆ 4 ಮಂದಿ ಬಂಧನ

24
0

ಹಾಸನದ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಹಾಸನ: ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಐವರನ್ನು ಬಂಧಿಸಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೇಬೀಡು ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯರ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯಿಂದ ಈ ವಸತಿ ನಿಲಯವನ್ನು ನೋಡಿಕೊಳ್ಳಲಾಗುತ್ತಿದೆ.

ವಸತಿ ಶಾಲೆಯಲ್ಲಿ ಓದುತ್ತಿರುವ ಎಂಟು ಅಪ್ರಾಪ್ತ ಬಾಲಕಿಯರಿಗೆ ಆರೋಪಿಗಳು ಲೈಂಗಿಕ ಕಿರುಕುಳ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ: ಆರು ಮಂದಿ ಬಂಧನ

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲರು, ಇಬ್ಬರು ಶಿಕ್ಷಕರು ಹಾಗೂ ಓರ್ವ ಭದ್ರತಾ ಸಿಬ್ಬಂದಿ ಸೇರಿದಂತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. 

ಆರೋಪಿಗಳ ವಿರುದ್ಧ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬರಬೇಕಿದೆ. ಈ ಸಂಬಂಧ ತನಿಖೆ ನಡೆಯುತ್ತಿದೆ.

LEAVE A REPLY

Please enter your comment!
Please enter your name here