Home ಕರ್ನಾಟಕ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

57
0
ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು:

ಕನ್ನಡ ನಾಡು,ನುಡಿ, ಸಂಸ್ಕೃತಿಗೆ ಕೊಡುಗೆ ನೀಡಿದ ಸಾಧಕರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿಂದು ಆಯೋಜಿಸಿದ್ದ ಸಮಾರಂಭದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ, ಗೌರವಿಸಿದರು.

ಬಳಿಕ ಮಾತನಾಡಿದ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಭಾಷೆಯನ್ನು ಬಳಸಿದಷ್ಟು ಬೆಳೆಯುತ್ತಾ ಹೋಗುತ್ತದೆ. ಕನ್ನಡ ಭಾಷೆಗೆ ತನ್ನದೇ ಆದ ಮಹತ್ವವಿದ್ದು, ಕನ್ನಡವನ್ನು ಉಳಿಸಿ ಬೆಳೆಸೋಣ ಎಂದು ಕರೆ ನೀಡಿದರು.

ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿದ್ದು, ಇವರಿಂದ ನಾಡಿಗೆ ಇನ್ನಷ್ಟು ಸೇವೆ ದೊರೆಯಲಿ ಎಂದು ಮುಖ್ಯಮಂತ್ರಿ ಆಶಿಸಿದರು.

ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಪ್ರಶಸ್ತಿ ಪುರಸ್ಕೃತರ ಪರವಾಗಿ ಮಾತನಾಡಿದ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಬಿ.ಜಿ.ಕೆರೆಯ ರೈತ ಮಹಿಳೆ ಎಸ್.ವಿ. ಸುಮಂಗಲಮ್ಮ ವೀರಭದ್ರಪ್ಪ, ಬರಗಾಲ ಪೀಡಿತ ತಮ್ಮ ಜಿಲ್ಲೆಯಲ್ಲಿ ಸಂಕಷ್ಟ ಪರಿಸ್ಥಿತಿಯಲ್ಲೂ ರೈತರು ಕೃಷಿಯಲ್ಲಿ ತೊಡಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳುವ ಪ್ರವೃತ್ತಿಯವರಲ್ಲ. ಸಂಕಷ್ಟದಲ್ಲೂ ಬದುಕುವ ಕಲೆಯನ್ನು ರೂಢಿಸಿಕೊಂಡಿದ್ದಾರೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು.
ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಕರ್ನಾಟಕ ಅತ್ಯಂತ ವೈಭವದ ಭೌಗೋಳಿಕ ಹಿನ್ನೆಲೆ ಹೊಂದಿದ್ದು, ಕನ್ನಡ ಭಾಷೆಗೆ ಭವ್ಯ ಇತಿಹಾಸವಿದೆ. ಭಾಷೆ ಅಳಿದರೆ ಸಂಸ್ಕೃತಿ ನಾಶವಾಗುತ್ತದೆ. ಹಾಗಾಗಿ ನಾಡು, ನುಡಿ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡಿದ್ದು, ಮುಂದೆ ಈ ಜವಾಬ್ದಾರಿ ವಹಿಸಿಕೊಳ್ಳುವುದು ಇಲಾಖೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಮುನ್ನಡೆಸಲಿ ಎಂದು ಸಿ.ಟಿ. ರವಿ ಆಶಿಸಿದರು.
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದ ತೇಜಸ್ವಿ ಸೂರ್ಯ ಶಾಸಕ ಉದಯ ಗರುಡಾಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಬಳಿಕ ಮಧ್ಯಾಹ್ನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಪ್ರಶಸ್ತಿ ಪುರಸ್ಕೃತರ ಗೌರವಾರ್ಥ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಭೋಜನ ಕೂಟ ಏರ್ಪಡಿಸಿದೆ.

LEAVE A REPLY

Please enter your comment!
Please enter your name here