Home Uncategorized ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು

ಸಾರಿಗೆ ನೌಕರರಿಗೆ ಶೇ 15ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ: ಸಚಿವ ಶ್ರೀರಾಮುಲು

29
0

ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ. ಬೆಂಗಳೂರು: ಸಾರಿಗೆ ಇಲಾಖೆ ಸಿಬ್ಬಂದಿ ವೇತನ ಪರಿಷ್ಕರಣೆ ಸಂಬಂಧ ಗುರುವಾರ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ಶೇ.15 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕಳೆದ 27 ವರ್ಷಗಳಲ್ಲಿ ಅತ್ಯಧಿಕ ವೇತನ ಪರಿಷ್ಕರಣೆಯನ್ನು ನಮ್ಮ ಸರ್ಕಾರ ಈಗ ಮಾಡಿದೆ ಎಂದು ಹೇಳಿದ್ದಾರೆ. ಈ ನಿರ್ಧಾರದಿಂದ ರಾಜ್ಯದ ಎಲ್ಲ ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಅಂದಾಜು 550 ಕೋಟಿ ರು ಹೆಚ್ಚುವರಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ.

ಇದು ಬಹುದಿನಗಳ ಬೇಡಿಕೆಯಾಗಿದ್ದು, ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳು, ಕಾರ್ಮಿಕ ಮುಖಂಡರುಗಳೊಡನೆ ನಿರಂತರ ಸಭೆಗಳ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಮುಖ್ಯಮಂತ್ರಿಗಳು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು ಈ ಕುರಿತು ಆದೇಶ ಆಗಲಿದೆ.(2)#ksrtc #karnatakasarige
— B Sriramulu (@sriramulubjp) March 16, 2023

ಇದು ನಮ್ಮ ಸಿಬ್ಬಂದಿಗೆ ಶುಭ ಸುದ್ದಿ ಆಗಿದ್ದು, ಸದಾ ಉತ್ತಮ ಜನಸೇವೆಗೆ ಹೆಸರು ಮಾಡಿರೋ ನಮ್ಮ ಸಿಬ್ಬಂದಿ, ತಾವು ನೀಡಿರುವ ಬಂದ್ ಕರೆ ಹಿಂಪಡೆದು ಎಂದಿನಂತೆ ಉತ್ತಮ ಸೇವೆಗಳನ್ನು ಯಾವುದೇ ವ್ಯತ್ಯಯ ಆಗದಂತೆ ಮುಂದುವರಿಸಲಿದ್ದಾರೆ ಎಂಬ ನಂಬಿಕೆ ಇದೆ ಎಂದು ರಾಮುಲು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರ ವೇತನ ಶೇ.15ರಷ್ಟು ಹೆಚ್ಚಳಕ್ಕೆ ನಿರ್ಧಾರ, ಇಂದೇ ಆದೇಶ: ಸಿಎಂ ಬೊಮ್ಮಾಯಿ

ಶೇ 20 ರಷ್ಟು ವೇತನ ಹೆಚ್ಚಳಕ್ಕೆ ಪಟ್ಟು ಹಿಡಿದಿರುವ ಸಾರಿಗೆ ನಿಗಮಗಳ ನೌಕರರು ಇದೇ ಮಾರ್ಚ್ 24 ರಂದು ರಾಜ್ಯದಾದ್ಯಂತ ಮುಷ್ಕರಕ್ಕೆ ಕರೆ ನೀಡಿದ್ದರು. ರಾಜ್ಯ ಸರ್ಕಾರ ಶೇ 14 ರಷ್ಟು ಮಾಡಬಹುದು ಎನ್ನಲಾಗಿತ್ತು. ಆದರೆ, ಇದೀಗ ಶೇ 15 ರಷ್ಟು ವೇತನ ಹೆಚ್ಚಳ ಮಾಡಿದೆ.

ಇದು ಬಹುದಿನಗಳ ಬೇಡಿಕೆಯಾಗಿದ್ದು, ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕರುಗಳು, ಕಾರ್ಮಿಕ ಮುಖಂಡರುಗಳೊಡನೆ ನಿರಂತರ ಸಭೆಗಳ ನಂತರ ಈ ನಿರ್ಧಾರಕ್ಕೆ ಬರಲಾಗಿದೆ. ಮುಖ್ಯಮಂತ್ರಿಗಳು ಈ ಮಹತ್ವದ ತೀರ್ಮಾನ ತೆಗೆದುಕೊಂಡಿದ್ದು, ಇಂದು ಈ ಕುರಿತು ಆದೇಶ ಆಗಲಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಸರ್ಕಾರವು ಶೇ.15% ವೇತನ‌ ಪರಿಷ್ಕರಣೆಯ ನಿರ್ಧಾರ ಕೈಗೊಂಡಿದೆ. ಇದು ನಮ್ಮ ಸಿಬ್ಬಂದಿಗೆ ಶುಭ ಸುದ್ದಿ.(3)#ksrtc #karnatakasarige
— B Sriramulu (@sriramulubjp) March 16, 2023

LEAVE A REPLY

Please enter your comment!
Please enter your name here