Home Uncategorized ಸಾರ್ವಜನಿಕವಾಗಿ ಕಿತ್ತಾಡುತ್ತಿರುವ ಮಹಿಳಾ ಅಧಿಕಾರಿಗಳನ್ನು ವಜಾಗೊಳಿಸಿ ಎಂದು ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ವಿಶ್ವನಾಥ್ ಆಗ್ರಹ: ಗ್ಯಾಲರಿಯಲ್ಲಿ ಕುಳಿತು...

ಸಾರ್ವಜನಿಕವಾಗಿ ಕಿತ್ತಾಡುತ್ತಿರುವ ಮಹಿಳಾ ಅಧಿಕಾರಿಗಳನ್ನು ವಜಾಗೊಳಿಸಿ ಎಂದು ವಿಧಾನಪರಿಷತ್ತಿನಲ್ಲಿ ಎಂಎಲ್ಸಿ ವಿಶ್ವನಾಥ್ ಆಗ್ರಹ: ಗ್ಯಾಲರಿಯಲ್ಲಿ ಕುಳಿತು ಗಂಭೀರವಾಗಿ ಕೇಳಿಸಿಕೊಂಡ ಮುನೀಶ್ ಮೌದ್ಗಿಲ್

20
0

ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮಧ್ಯೆ ಬಿಸಿಬಿಸಿ ಚರ್ಚೆಯಾಗುತ್ತಿದೆ.  ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಜಗಳ ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದಲ್ಲಿ ಜನಪ್ರತಿನಿಧಿಗಳ ಮಧ್ಯೆ ಬಿಸಿಬಿಸಿ ಚರ್ಚೆಯಾಗುತ್ತಿದೆ. 

ನಿನ್ನೆ ವಿಧಾನಪರಿಷತ್ತಿನಲ್ಲಿ ಈ ವಿಚಾರ ಪ್ರಸ್ತಾಪಿಸಿದ ಬಿಜೆಪಿ ಎಂಎಲ್ ಸಿ ಎಚ್ ವಿಶ್ವನಾಥ್ ಇಬ್ಬರನ್ನೂ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಒತ್ತಾಯಿಸಿದರು.

ನಿನ್ನೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ವಿಶ್ವನಾಥ್, ರಾಜ್ಯದ ಜನತೆಯ ಮುಂದೆ ಇಬ್ಬರು ಉನ್ನತ ಮಟ್ಟದ ಅಧಿಕಾರಿಗಳು ಈ ರೀತಿ ಕಿತ್ತಾಡಿಕೊಂಡರೆ ಸರ್ಕಾರದ ಆಡಳಿತದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಸರ್ಕಾರ ಅವರಿಗೆ ಶೋಕಾಸ್ ನೋಟಿಸ್‌ ಕೂಡ ನೀಡಿಲ್ಲ, ಅವರ ವಿರುದ್ಧ ಕ್ರಮ ಕೈಗೊಳ್ಳಲು ನಮ್ಮ ಮುಖ್ಯಮಂತ್ರಿ ಯಾರಿಗೆ ಭಯಪಡುತ್ತಿದ್ದಾರೆ? ಇಂತಹ ಅಧಿಕಾರಿಗಳು ನಮ್ಮ ರಾಜ್ಯದಲ್ಲಿ ನಮಗೆ ಬೇಕಾ ಎಂಬ ಪ್ರಶ್ನೆ ಮೂಡುತ್ತದೆ. ಸರ್ಕಾರ ಕೂಡಲೇ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರಕರಣ ಬಗ್ಗೆ ವಿಚಾರಣೆ ನಡೆಸಬೇಕೆಂದು ಆಗ್ರಹಿಸಿದರು. 

ಇದಕ್ಕೆ ಉತ್ತರಿಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಸರ್ಕಾರ ಈಗಾಗಲೇ ಇಬ್ಬರು ಅಧಿಕಾರಿಗಳ ವಿರುದ್ಧ ಯಾವುದೇ ಹುದ್ದೆ ನೀಡದೆ ವರ್ಗಾವಣೆ ಮಾಡಿ ಕ್ರಮ ಕೈಗೊಂಡಿದೆ. ಅವರ ವಿರುದ್ಧ ಕಠಿಣ ಕಾನೂನು ಕ್ರಮವನ್ನೂ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. 

ಇದೇ ಸಂದರ್ಭದಲ್ಲಿ, ರೂಪ ಅವರ ಐಎಎಸ್ ಅಧಿಕಾರಿ ಪತಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವರ್ಗಾವಣೆಗೊಂಡ ಮುನೀಶ್ ಮೌದ್ಗಿಲ್ ಅವರು ವಿಧಾನಪರಿಷತ್ತಿಗೆ ಆಗಮಿಸಿ ಚರ್ಚೆಯ ಸಮಯದಲ್ಲಿ ಅಧಿಕಾರಿಗಳ ಗ್ಯಾಲರಿಯಲ್ಲಿ ಗಂಭೀರವಾಗಿ ಕುಳಿತು ಕೇಳುತ್ತಿದ್ದರು. ತಮ್ಮ ಪತ್ನಿ ಮತ್ತು ರೋಹಿಣಿ ಸಿಂಧೂರಿ ಬಗ್ಗೆ ಮಾತನಾಡುತ್ತಿರುವಾಗ ಭಾವಪರವಶರಾದಂತೆ ಕಂಡುಬಂದರು.

LEAVE A REPLY

Please enter your comment!
Please enter your name here