Home ಸಿನಿಮಾ ‘ಸಾವಿತ್ರಿ’ ಯಾಗುತ್ತಿದ್ದಾರೆ ‘ತಾರಾ’

‘ಸಾವಿತ್ರಿ’ ಯಾಗುತ್ತಿದ್ದಾರೆ ‘ತಾರಾ’

79
0

ಬೆಂಗಳೂರು:

ಮೂರು ದಶಕಗಳಿಂದ ವಿವಿಧ ಪಾತ್ರಗಳಲ್ಲಿ ಅಭಿನಯಿಸಿ ಜನಮನಸೂರೆಗೊಂಡಿರುವ ನಟಿ ತಾರಾ.

ಈಗ ‘ಸಾವಿತ್ರಿ’ ಚಿತ್ರದ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೇ 19 ರಿಂದ ಆರಂಭವಾಗಲಿರುವ ಚಿತ್ರೀಕರಣ ಬೆಂಗಳೂರು ಸುತ್ತಮುತ್ತ 45 ದಿನಗಳ ಕಾಲ ನಡೆಯಲಿದೆ.

ಪಿ.ಎನ್.ಪಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಪ್ರಶಾಂತ್ ಕುಮಾರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಪ್ರಶಾಂತ್ ಕುಮಾರ್ ಮೂಲತಃ ಸಾಫ್ಟ್ ವೇರ್ ಉದ್ಯೋಗಿ.

ಎಸ್ ದಿನೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ‌ ಮಾಡುತ್ತಿದ್ದಾರೆ. ‘ಉಯ್ಯಾಲೆ’ ನಂತರ ಇದು ನಿರ್ದೇಶಕರಿಗೆ ಎರಡನೇ ಚಿತ್ರ.

ಖ್ಯಾತ ಸಾಹಿತಿ ಹೃದಯ ಶಿವ ನಾಲ್ಕು ಹಾಡುಗಳನ್ನು ರಚಿಸಿದ್ದು, ಚಿತ್ರಕ್ಕೆ ಸಂಗೀತ ನೀಡುತ್ತಿದ್ದಾರೆ. ಗೀತರಚನೆ ಹಾಗೂ ಸಂಭಾಷಣೆ ಕೂಡ ಹೃದಯ ಶಿವ ಅವರದೆ. ಇಷ್ಟು ದಿನ ಗೀತರಚನೆಕಾರರಾಗಿದ್ದ ಹೃದಯ ಶಿವ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕರಾಗಿ ಪಾದಾರ್ಪಣೆ ಮಾಡುತ್ತಿದ್ದಾರೆ.

ತಾರಾ, ಪ್ರಕಾಶ್ ಬೆಳವಾಡಿ, ಸಂಜು ಬಸಯ್ಯ(ಕಾಮಿಡಿ ಕಿಲಾಡಿಗಳು) ,‌ಬೇಬಿ ಲೈಲಾ, ಪ್ರಮೋದ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

ಮೊಬೈಲ್ ಸೇರಿದಂತೆ ಆಧುನಿಕ ತಂತ್ರಜ್ಞಾನಗಳಿಂದ ಮಕ್ಕಳ ಮೇಲಾಗುವ ಪರಿಣಾಮಗಳೇನು. . ಎಂಬುದು ಚಿತ್ರದ ಕಥಾಹಂದರ.

LEAVE A REPLY

Please enter your comment!
Please enter your name here