ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಾನಂದ ಪಾಟೀಲ್ ಸೋಮಜಾಳ ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ವಿಜಯಪುರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಜೆಡಿಎಸ್ ಪಂಚರತ್ನ ರಥಯಾತ್ರೆಯಲ್ಲಿ ಭಾಗವಹಿಸಿದ್ದ ಶಿವಾನಂದ ಪಾಲೀಟ್ ಅವರು ಮಧ್ಯಾಹ್ನ ಸಿಂದಗಿಗೆ ತೆರಳಿದ್ದರು. ಸಿಂದಗಿಯಲ್ಲಿ ಪರಿಚಯಸ್ಥರ ಮನೆಯಲ್ಲಿ ಮಾತನಾಡುತ್ತ ಕುಳಿತಿದ್ದಾಗ ಏಕಾಏಕ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಇದನ್ನು ಓದಿ: ‘ದಳ’ಪತಿಗಳಿಗೆ ಶಾಕ್: ನೆಲಮಂಗಲದ 11 ನಾಯಕರು ಕಾಂಗ್ರೆಸ್ ಗೆ ಸೇರ್ಪಡೆ
54 ವರ್ಷದ ಶಿವಾನಂದ ಪಾಟೀಲ್ ಅವರು ಪತ್ನಿ, ಓರ್ವ ಪುತ್ರ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಭಾರತೀಯ ಸೇನೆಯಲ್ಲಿ 16 ವರ್ಷ ಸೇವೆ ಸಲ್ಲಿಸಿದ್ದ ಮಾಜಿ ಯೋಧ ಶಿವಾನಂದ ಪಾಟೀಲ್ ಅವರು ಇತ್ತೀಚಿಗೆ ರಾಜಕೀಯದೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿದ್ದರು. ವಿಧಾನಸಭೆ ಚುನಾವಣೆಗೆ ಜೆಡಿಎಸ್ ಬಿಡುಗಡೆ ಮಾಡಿದ್ದ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಶಿವಾನಂದ ಪಾಟೀಲ್ ಅವರಿಗೆ ಟಿಕೆಟ್ ಘೋಷಿಸಲಾಗಿತ್ತು.