Home Uncategorized ಸಿಎಂ ಬೊಮ್ಮಾಯಿ ಅವರ ಬಜೆಟ್ ಭವಿಷ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ: ಸಚಿವ ಸಿಸಿ ಪಾಟೀಲ್

ಸಿಎಂ ಬೊಮ್ಮಾಯಿ ಅವರ ಬಜೆಟ್ ಭವಿಷ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ: ಸಚಿವ ಸಿಸಿ ಪಾಟೀಲ್

19
0
Advertisement
bengaluru

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಜೆಟ್ ಭವಿಶ್ಯದಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹೇಳಿದ್ದಾರೆ. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಬಜೆಟ್ ಭವಿಶ್ಯದಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ಅವರು ಹೇಳಿದ್ದಾರೆ.

ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಸಕ್ತ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಸಿಸಿ ಪಾಟೀಲ್ ಅವರು, ಇದು ಉತ್ತಮ ಆಡಳಿತಕ್ಕೆ ನಿದರ್ಶನವಾಗಿದೆ. ಬಜೆಟ್‌ನಲ್ಲಿ ನಗರ ಮತ್ತು ಗ್ರಾಮೀಣಾಭಿವೃದ್ಧಿಗೆ ಸಮಾನ ಪ್ರಾಮುಖ್ಯತೆ ನೀಡಲಾಗಿದ್ದು, ಉತ್ತಮ ಬಜೆಟ್‌ಗಾಗಿ ಸಿಎಂಗೆ ಧನ್ಯವಾದ ಅರ್ಪಿಸುತ್ತೇನೆಂದು ಹೇಳಿದ್ದಾರೆ.

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಗದಗ ಶಾಸಕ ಎಚ್.ಕೆ.ಪಾಟೀಲ ಮಾತನಾಡಿ, ಇದೊಂದು ನಿರಾಶಾದಾಯಕ ಬಜೆಟ್ ಆಗಿದೆ, ಬಜೆಟ್‌ನಲ್ಲಿ ವಿಶ್ವಾಸಾರ್ಹತೆಯೂ ಕಡಿಮೆಯಾಗಿದೆ, ಜನರು ಈ ಬಜೆಟ್ ಅನ್ನು ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದ ಉಪಕುಲಪತಿ ವಿಷ್ಣುಕಾಂತ್ ಚಟಪಲ್ಲಿ ಮಾತನಾಡಿ, ಬಜೆಟ್‌ನಲ್ಲಿ ಗ್ರಾಮೀಣಾಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, ಸಣ್ಣ ರೈತರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ, ಇದು ಅಸಂಘಟಿತ ಕಾರ್ಮಿಕರಿಗೂ ಆರ್ಥಿಕ ಮತ್ತು ಸಾಮಾಜಿಕ ಭದ್ರತೆಯನ್ನು ನೀಡಿದೆ ಎಂದು ತಿಳಿಸಿದ್ದಾರೆ.

bengaluru bengaluru

bengaluru

LEAVE A REPLY

Please enter your comment!
Please enter your name here