Home Uncategorized ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ: ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ...

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಂಜೆ ಸಚಿವ ಸಂಪುಟ ಸಭೆ: ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ ನಿರೀಕ್ಷೆ

11
0

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಗುರುವಾರ ಸಂಜೆ ಮಹತ್ವದ ಸಚಿವ ಸಂಪುಟ ಸಭೆ ಬೆಳಗಾವಿಯಲ್ಲಿ ನಡೆಯಲಿದೆ. ವಿವಿಧ ವರ್ಗಗಳಿಗೆ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ. ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಇಂದು ಗುರುವಾರ ಸಂಜೆ ಮಹತ್ವದ ಸಚಿವ ಸಂಪುಟ ಸಭೆ ಬೆಳಗಾವಿಯಲ್ಲಿ ನಡೆಯಲಿದೆ. ವಿವಿಧ ವರ್ಗಗಳಿಗೆ ಮೀಸಲಾತಿ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯುವ ನಿರೀಕ್ಷೆ ಇದೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಭೇಟಿ, ಜನವರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಆಗಮನ, ಸಚಿವ ಸಂಪುಟ ವಿಸ್ತರಣೆ, ಸನ್ನಿಹಿತವಾಗಿರುವ ವಿಧಾನಸಭೆ ಚುನಾವಣೆ ಇತ್ಯಾದಿಗಳು ಇರುವುದರಿಂದ ಮುಖ್ಯಮಂತ್ರಿಗಳು ಇಂದು ಸಂಪುಟ ಸಹೋದ್ಯೋಗಿಗಳ ಜೊತೆ ನಡೆಸುತ್ತಿರುವ ಸಭೆ ಪ್ರಮುಖವಾಗಿದೆ.

ಹಿಂದುಳಿದ ಆಯೋಗದ ವರದಿ, ಒಕ್ಕಲಿಗರ ಮೀಸಲಾತಿ, ಪಂಚಮಸಾಲಿ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.ಅವಧಿಗೂ ಒಂದು ದಿನ ಮೊದಲೇ ಬೆಳಗಾವಿಯ ಚಳಿಗಾಲದ ಅಧಿವೇಶನ ಇಂದು ಅಂತ್ಯಗೊಳ್ಳಲಿದೆ. ಉತ್ತರ ಕರ್ನಾಟಕದ ಬಗ್ಗೆ ಚರ್ಚೆಗೆ ಸ್ಪೀಕರ್ ಕಾಗೇರಿ ಅವರು ಅವಕಾಶ ನೀಡಿದ್ದಾರೆ. ಹೀಗಾಗಿ ಇಂದು ರಾತ್ರಿವರೆಗೆ ಚರ್ಚೆ ನಡೆಸಿದ ಬಳಿಕ ಕಲಾಪಗಳು ಮುಕ್ತಾಯಗೊಳ್ಳಲಿವೆ.

ಸಿಎಂ ಇಂದಿನ ಕಾರ್ಯಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಿಗ್ಗೆ 10.15 ಗಂಟೆಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್, ಮಹಾತ್ಮಾ ಗಾಂಧಿ, ಕಿತ್ತೂರ ರಾಣಿ ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ ಅವರ ಪ್ರತಿಮೆ ಸ್ಥಾಪನೆಗೆ ಗುದ್ದಲಿಪೂಜೆ ನೆರವೇರಿಸುವರು. ಕಳೆದ ವರ್ಷದ ಬೆಳಗಾವಿ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಘೋಷಿಸಿದಂತೆ ಈ ಪ್ರತಿಮೆಗಳನ್ನು ಸ್ಥಾಪಿಸಲಾಗುತ್ತಿದೆ. ಆಡಳಿತ ಮತ್ತು ವಿಪಕ್ಷ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. 

LEAVE A REPLY

Please enter your comment!
Please enter your name here