Home Uncategorized ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು, ಮಾಡಾಳ್ ವಿರೂಪಾಕ್ಷಪ್ಪನ ಬಂಧನವಾಗಬೇಕು: ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಭಾರೀ ಪ್ರತಿಭಟನೆ,...

ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು, ಮಾಡಾಳ್ ವಿರೂಪಾಕ್ಷಪ್ಪನ ಬಂಧನವಾಗಬೇಕು: ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರಿಂದ ಭಾರೀ ಪ್ರತಿಭಟನೆ, ಪೊಲೀಸರ ವಶ

17
0
Advertisement
bengaluru

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು. ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಗುತ್ತಿಗೆದಾರರಿಂದ 40 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ದಾಳಿ ವೇಳೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದು ನಂತರ ಅವರ ಕಚೇರಿ ನಿವಾಸದಲ್ಲಿ ತೀವ್ರ ಶೋಧ ನಡೆಸಿದ ಲೋಕಾಯುಕ್ತ ಸಿಬ್ಬಂದಿ ಮತ್ತು ಪೊಲೀಸರು ಬೆಚ್ಚಿಬಿದ್ದಿದ್ದರು.

ಲೆಕ್ಕಕ್ಕೆ ಸಿಗದ 8 ಕೋಟಿ ರೂಪಾಯಿಗೂ ಅಧಿಕ ನಗದು ಸಿಕ್ಕಿದ್ದಲ್ಲದೆ ಅಪಾರ ಪ್ರಮಾಣದ ಚಿನ್ನ, ಆಸ್ತಿ ದಾಖಲೆಗಳು ಪತ್ತೆಯಾಗಿವೆ. ಈ ಬಗ್ಗೆ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಬಿಜೆಪಿ ನಾಯಕರು ಪ್ರತಿಕ್ರಿಯಿಸಿದ್ದಾರೆ. ಲೋಕಾಯುಕ್ತ ತನಿಖೆಯಿಂದ ಸತ್ಯ ಹೊರಬರಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ, ಯಾರನ್ನೂ ಕಾನೂನು ಶಿಕ್ಷೆಯಿಂದ ಬಚಾವ್ ಮಾಡುವ ಪ್ರಶ್ನೆಯಿಲ್ಲ ಎಂದಿದ್ದಾರೆ. ಆದರೆ ಈ ಪ್ರಕರಣ ವಿಧಾನಸಭೆ ಚುನಾವಣೆ ಹೊಸ್ತಿಲಿನಲ್ಲಿ ಬಿಜೆಪಿಗೆ ಇರಿಸುಮುರುಸು ದೊಡ್ಡ ಪೆಟ್ಟು ಆಗಿರುವುದಂತೂ ಸುಳ್ಳಲ್ಲ. 

ಕಾಂಗ್ರೆಸ್ ಗೆ ಅಸ್ತ್ರ, ಭಾರೀ ಪ್ರತಿಭಟನೆ: ರಾಜ್ಯದಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಕಾಂಗ್ರೆಸ್ ಗೆ ಈ ಘಟನೆ ಪ್ರಮುಖ ಅಸ್ತ್ರವಾಗಿರುವುದರಲ್ಲಿ ಸಂಶಯವಿಲ್ಲ. ರಾಜ್ಯ ಕಾಂಗ್ರೆಸ್ ನಾಯಕರು ಇಂದು ಬೆಂಗಳೂರಿನಲ್ಲಿ ರಸ್ತೆಗಿಳಿದು ಭಾರೀ ಪ್ರತಿಭಟನೆಗಿಳಿದಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ಕೇಳಿದ್ದಾರೆ.ಕಾಂಗ್ರೆಸ್ ಕಚೇರಿಯಿಂದ ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದ ಕಡೆ ಪ್ರತಿಭಟನೆ ಸಾಗಿ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಗರದ ರೇಸ್​ ಕೋರ್ಸ್​ ರಸ್ತೆಯ ಕಾಂಗ್ರೆಸ್​​ ಭವನದ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ವೇಳೆ ಪೋಸ್ಟರ್​, ಸೂಟ್​ಕೇಸ್, ಹಣವಿರುವ ಗುಟ್ಕಾ ಬ್ಯಾಗ್​, ನಕಲಿ ನೋಟ್​ ಪ್ರದರ್ಶಿಸಿ ಪ್ರತಿಭಟಿಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಸುರ್ಜೇವಾಲ, ವಿಪಕ್ಷನಾಯಕ ಸಿದ್ದರಾಮಯ್ಯ, ಶಾಸಕ ರಾಮಲಿಂಗಾರೆಡ್ಡಿ, ಶಾಸಕ ದಿನೇಶ್​​ ಗುಂಡೂರಾವ್, ಕೆ.ಜೆ.ಜಾರ್ಜ್, ಕೃಷ್ಣ ಭೈರೇಗೌಡ ಹಾಗೂ ಸಲೀಂ ಅಹ್ಮದ್ ಭಾಗಿಯಾಗಿದ್ದರು. 

bengaluru bengaluru

ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ: ಸುರ್ಜೆವಾಲ
ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ರಾಜ್ಯದಲ್ಲಿ ಇರುವುದು ಭ್ರಷ್ಟಾಚಾರದ ಸರ್ಕಾರ. ಪ್ರತಿಯೊಂದು ಕೆಲಸಕ್ಕೂ 40 ಪರ್ಸೆಂಟ್​​ ಕಮಿಷನ್ ಕೇಳುತ್ತಾರೆ. ರಾಜ್ಯದ ಜನರ ಹಣವನ್ನೂ ಲೂಟಿ ಮಾಡುತ್ತಿದ್ದಾರೆ. ಕಮಿಷನ್ ನೀಡಲಾಗದೆ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಮಿಷನ್​ ಬಗ್ಗೆ ಪ್ರಧಾನಿ ಮೋದಿಗೆ ಕೆಂಪಣ್ಣ ದೂರು ನೀಡಿದ್ದಾರೆ. ಆದರೆ ಪ್ರಧಾನಿಗಳಿಂದ ಯಾವುದೇ ಉತ್ತರ ಸಿಕ್ಕಿಲ್ಲ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ಶಾಸಕ ಮಾಡಾಳ್‌ ಪುತ್ರನ ಮನೆಯಲ್ಲಿ ಕೋಟಿ ಕೋಟಿ ಹಣ ಪತ್ತೆ ಆಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉತ್ತರ ನೀಡಬೇಕು ಎಂದು ಒತ್ತಾಯಿಸಿದರು.ಪ್ರಶಾಂತ್ ಅವರ ಖಾಸಗಿ ಕಚೇರಿಯಿಂದ 2.02 ಕೋಟಿ ರೂಪಾಯಿ ಲೆಕ್ಕವಿಲ್ಲದ ಹಣವನ್ನು ಪೊಲೀಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅದೇ ಸಮಯದಲ್ಲಿ ಅವರ ನಿವಾಸದಲ್ಲಿಯೂ 6.10 ಕೋಟಿ ರೂಪಾಯಿ ಲೆಕ್ಕಕ್ಕೆ ಸಿಗದ ಹಣ ಪತ್ತೆಯಾಗಿದೆ. ನೋಟಿನ ಕಂತೆಯನ್ನು ಲೋಕಾಯುಕ್ತ ಸಿಬ್ಬಂದಿ ವಿಮಲ್ ಬ್ಯಾಗ್ ನಲ್ಲಿ ತುಂಬಿ ಕಚೇರಿಗೆ ಕೊಂಡೊಯ್ಯುತ್ತಿರುವುದು pic.twitter.com/loH6Cs4kgf— kannadaprabha (@KannadaPrabha) March 4, 2023

ಬಿಜೆಪಿ ವಿರುದ್ಧ ಹರಿಹಾಯ್ದ ಸಿದ್ದರಾಮಯ್ಯ: ತಮ್ಮ ಸರ್ಕಾರ ಭ್ರಷ್ಟಾಚಾರ ಮುಕ್ತವಾಗಿದೆ ಎಂದು ಸಿಎಂ ಸುಳ್ಳು ಹೇಳುತ್ತಿದ್ದಾರೆ. ಹಾಗಾದರೆ ಏನಾಗುತ್ತಿದೆ… ನಾವು ಎಂದಿಗೂ ಭಯೋತ್ಪಾದನೆಯನ್ನು ಬೆಂಬಲಿಸಿಲ್ಲ. ಕಾಂಗ್ರೆಸ್ ಏಕೆ ಭಯೋತ್ಪಾದನೆಯನ್ನು ಬೆಂಬಲಿಸುತ್ತದೆ ಎಂದು ಅಮಿತ್ ಶಾ ಕೇಳುತ್ತಾರೆ. ಅಮಿತ್ ಶಾ ಕೂಡ ಮಹಾ ಸುಳ್ಳುಗಾರ. ಈ ಬಗ್ಗೆ ಇಂದು ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.

#WATCH | Several Congress leaders including former CM Siddaramaiah detained by Police during their protest against the Karnataka govt in Bengaluru demanding the arrest of BJP MLA Maadal Virupaksha whose son was caught taking bribe pic.twitter.com/3x8aJsk3WU
— ANI (@ANI) March 4, 2023

ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಗೋಡೆಗಳ ಮೇಲೆ ಪೋಸ್ಟರ್​ ಅಂಟಿಸಿ ಕೈ ಕಾರ್ಯಕರ್ತರು ಪ್ರತಿಭಟನೆ ಮಾಡಿದ್ದಾರೆ. ನಂತರ ಕಾಂಗ್ರೆಸ್ ಕಾರ್ಯಕರ್ತರು ಸಿಎಂ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ಬಂಧಿಸಿದರು. ಬಿಜೆಪಿ ಶಾಸಕ ಮಾಡಾಳ್ ವಿರುದ್ಧ ಬಿಜೆಪಿಯ ರೋಲ್ ಕಾಲ್ “ಮಾಡೆಲ್” ವಿರೂಪಾಕ್ಷಪ್ಪ ಎಂಬ ಪೋಸ್ಟರ್​​ನ್ನು ಅಂಟಿಸಿದರು. 

ಹಾಗೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕ್ಷೇತ್ರ ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪೇ ಎಂಎಲ್ ಅಭಿಯಾನ ಆರಂಭಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷ ಮತ್ತು ಅವರ ಪುತ್ರನ ಬಂಧನಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.


bengaluru

LEAVE A REPLY

Please enter your comment!
Please enter your name here