Home Uncategorized ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ

ಸಿಎಂ ಬೊಮ್ಮಾಯಿ ಸೂಚನೆ: ಮುಖ್ಯ ಕಾರ್ಯದರ್ಶಿಗಳ ಭೇಟಿಯಾದ ರೋಹಿಣಿ ಸಿಂಧೂರಿ

23
0

ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ. ಬೆಂಗಳೂರು: ಐಎಎಸ್ ಹಾಗೂ ಐಪಿಎಸ್‌ನ ಇಬ್ಬರು ಮಹಿಳಾ ಅಧಿಕಾರಿಗಳ ಜಾಟಪಟಿ ನಾಡಿನಾದ್ಯಂತ ಜಗಜ್ಜಾಹಿರಾಗಿದ್ದು, ಈ ನಡುವಲ್ಲೇ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರು ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಸೋಮವಾರ ಭೇಟಿ ಮಾಡಿದ್ದಾರೆ.

ವಿಧಾನಸೌಧಕ್ಕೆ ಇಂದು ಆಗಮಿಸಿದ ರೋಹಿಣಿ ಸಿಂಧೂರಿಯವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಸರ್ಕಾರದ ಇಬ್ಬರು ಉನ್ನತ ಮಟ್ಟದ ಮಹಿಳಾ ಅಧಿಕಾರಿಗಳು ಹಾದಿರಂಪ ಬೀದಿರಂಪ ಎಂಬಂತೆ ಜಗಳಕ್ಕಿಳಿದಿರುವುದು ಸರ್ಕಾರಕ್ಕೆ ಮುಜುಗರವನ್ನುಂಟು ಮಾಡಿದೆ.

ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಇಬ್ಬರೂ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು.

ಇದರಂತೆ ಇಬ್ಬರೂ ಅಧಿಕಾರಿಗಳಿಗೆ ಮುಖ್ಯದರ್ಶಿಗಳು ನೋಟಿಸ್ ಜಾರಿ ಮಾಡಿದ್ದರು. ನೋಟಿಸ್ ಹಿನ್ನೆಲೆಯಲ್ಲಿ ಇಂದು ರೋಹಿಣಿ ಸಿಂಧೂರಿಯವರು ಇಂದು ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಮಾತುಕತೆ ನಡೆಸಿದ್ದಾರೆ.

ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಅಧಿಕಾರಿಗಳ ವರ್ತನೆ ಬಹಳ ಬೇಸರ ತರಿಸಿದೆ. ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ಜನ ದೇವಮಾನವರು ಎಂದುಕೊಂಡಿದ್ದಾರೆ. ಆದರೆ ಇವರಿಂದ ಎಲ್ಲಾ ಅಧಿಕಾರಿಗಳಿಗೂ ಅಪಮಾನವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಈಗಾಗಲೇ ಪೊಲೀಸ್ ಮಾಹಾನಿರ್ದೇಶಕರು ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಲಾಗಿದೆ. ಕಾನೂನು ಚೌಕಟ್ಟಿನೊಳಗೆ ಏನು ಕ್ರಮ ಕೈಗೊಳ್ಳಬೇಕು ಅದನ್ನು ಮುಖ್ಯಮಂತ್ರಿಗಳು ನಿರ್ಧರಿಸುತ್ತಾರೆ. ಈ ಹಿಂದೆ ಕೂಡ ಈ ಇಬ್ಬರಿಗೆ ನೋಟಿಸ್ ನೀಡಲಾಗಿತ್ತು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here