ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು. ಬೆಂಗಳೂರು: ಕ್ಷೇತ್ರಗಳಿಗೆ ಅನುದಾನ ಬಿಡುಗಡೆ, ಜಿಲ್ಲೆಗಳ ಉಸ್ತುವಾರಿ ಕೆಲಸಗಳು, ಶಾಸಕರ ಬೇಡಿಕೆಗಳು ಇತ್ಯಾದಿಗಳ ಬಗ್ಗೆ ತಿಳಿದುಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಮಂಗಳವಾರ ಕೂಡ ಕಾಂಗ್ರೆಸ್ ಶಾಸಕರ ಜೊತೆ ಸಭೆ ನಡೆಸಿದ್ದರು.
ಇದಕ್ಕೆ ಟೀಕೆ ಮಾಡಿರುವ ವಿರೋಧ ಪಕ್ಷ ಬಿಜೆಪಿ, ಕೇವಲ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಿದ್ದಕ್ಕೆ ಟೀಕೆ ವ್ಯಕ್ತಪಡಿಸಿದ್ದಾರೆ. ನಿನ್ನೆ ಸಿದ್ದರಾಮಯ್ಯನವರು ರಾಯಚೂರು, ವಿಜಯಪುರ, ಕೊಪ್ಪಳ, ಬೆಳಗಾವಿ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.
ಸಿಎಂ ಅವರ ನಡೆಗೆ ಟೀಕಿಸಿರುವ ಬಿಜೆಪಿ ಶಾಸಕ ಮತ್ತು ಮಾಜಿ ಸಚಿವ ಸುರೇಶ್ ಕುಮಾರ್, ಸಿದ್ದರಾಮಯ್ಯನವರು ರಾಜ್ಯದ ಎಲ್ಲಾ 224 ಶಾಸಕರಿಗೆ ಮುಖ್ಯಮಂತ್ರಿಗಳೇ ಅಥವಾ ಕೇವಲ ಗ್ಯಾರಂಟಿ ಯೋಜನೆಗಳಿಗೆ ಮಾತ್ರ ಮುಖ್ಯಮಂತ್ರಿಗಳೇ, ಸಿದ್ದರಾಮಯ್ಯನವರ ಸಭೆ ಮತ್ತು ಭರವಸೆಗಳು ಸಾರ್ವಜನಿಕರಲ್ಲಿ ಗೊಂದಲ, ಸಂಶಯ ಹುಟ್ಟಿಸುತ್ತಿದೆ ಎಂದರು.
ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಸಹ ಸಭೆಗಳನ್ನು ನಡೆಸಿದರು. ವಿಜಯಪುರದ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಟ್ವೀಟ್ ಮಾಡಿ, ಸ್ಥಳೀಯ ಅಭಿವೃದ್ಧಿ ಕೆಲಸಗಳು, ಅನುದಾನ, ಲೋಕಸಭೆ ಚುನಾವಣೆಗೆ ಸಿದ್ಧತೆ ಕುರಿತು ಚರ್ಚಿಸಲಾಯಿತು ಎಂದು ಬರೆದುಕೊಂಡಿದ್ದಾರೆ.
ಮಾನ್ಯ @CMofKarnataka ಶ್ರೀ @siddaramaiahನವರ ನೇತೃತ್ವದಲ್ಲಿ ಅವರ ಗೃಹಕಚೇರಿ ಕೃಷ್ಣಾದಲ್ಲಿಂದು ವಿಜಯಪುರ ಜಿಲ್ಲೆಯ ಸಚಿವರು ಮತ್ತು ಶಾಸಕರುಗಳ ಸಭೆ ನಡೆಸಲಾಯಿತು.
ಉಪಮುಖ್ಯಮಂತ್ರಿಗಳಾದ ಶ್ರೀ @DKShivakumar, ಸಚಿವರಾದ ಶ್ರೀ ಶಿವನಾಂದ ಪಾಟೀಲ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.
ಕ್ಷೇತ್ರಗಳ… pic.twitter.com/3rsj8059WQ
— M B Patil (@MBPatil) August 8, 2023